'ಹಿಂದೂಗಳಿಗೆ ಮಾತ್ರ ವ್ಯಾಪಾರ ಅವಕಾಶ': ಕದ್ರಿಯ ದೇವಸ್ಥಾನದಲ್ಲಿ ಬ್ಯಾನರ್

ಮಂಗಳೂರಿನ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ವ್ಯಾಪಾರ ಬಹಿಷ್ಕಾರದ ಬ್ಯಾನರ್ ಅಳವಡಿಕೆ ಮಾಡಲಾಗಿದೆ.

Share this Video
  • FB
  • Linkdin
  • Whatsapp

ಜ. 15ರಿಂದ 25ರವರೆಗೆ ಕದ್ರಿ ಜಾತ್ರೋತ್ಸವ ನಡೆಯಲಿದ್ದು, ದೇವಸ್ಥಾನದಲ್ಲಿ ವ್ಯಾಪಾರದ ಧರ್ಮ ದಂಗಲ್ ಶುರುವಾಗಿದೆ. ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ಉಲ್ಲೇಖಿಸಿ ವಿಹೆಚ್'ಪಿ ಹಾಗೂ ಭಜರಂಗದಳದಿಂದ ಬ್ಯಾನರ್ ಅಳವಡಿಕೆ ಮಾಡಲಾಗಿದ್ದು, 'ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಗಳಲ್ಲಿ ವಿಶ್ವಾಸ ಉಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರ ಅವಕಾಶ ಎಂದು ಬರೆಯಲಾಗಿದೆ. 'ಕುಕ್ಕರ್ ಬಾಂಬ್ ಆರೋಪಿ ಮೊದಲು ಟಾರ್ಗೆಟ್ ಮಾಡಿದ್ದು ಕದ್ರಿ ದೇವಸ್ಥಾನವನ್ನು, 'ಅಂಥಹ ಮನಸ್ಥಿತಿ ಮತ್ತು ವಿಗ್ರಹಾರಧನೆ ಹರಾಂ ಎಂದು ನಂಬಿದ ಯಾರಿಗೂ ವ್ಯಾಪಾರದ ಅವಕಾಶವಿಲ್ಲ ಎಂದು ದೇವಸ್ಥಾನದ ಪ್ರವೇಶದಲ್ಲೇ ಬ್ಯಾನರ್ ಹಾಕಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video