
ಮಂಗಳೂರು ಗೋಲಿಬಾರ್ ಸಮರ್ಥಿಸಿಕೊಂಡ ಸಿಎಂ ಯಡಿಯೂರಪ್ಪ!
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟಿದ್ದು, ಸಿಎಂ ಯಡಿಯೂರಪ್ಪ ನಗರಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದರು.
ಮಂಗಳೂರು(ಡಿ.21): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟಿದ್ದು, ಸಿಎಂ ಯಡಿಯೂರಪ್ಪ ನಗರಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದರು. ಈ ವೇಳೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ಪೊಲೀಸರು ನಡೆಸಿದ ಗೋಲಿಬಾರ್‌ನ್ನು ಸಮರ್ಥಿಸಿಕೊಂಡರು. ಪರಿಸ್ಥಿತಿ ಕೈ ಮೀರಿದ್ದರಿಂದಲೇ ಪೊಲೀಸರು ಗೋಲಿಬಾರ್ ನಡೆಸಿದ್ದಾರೆ ಎಂದು ಸಿಎಂ ಹೇಳಿದರು. ಉದ್ರಿಕ್ತರು ಪೊಲೀಸ್ ಠಾಣೆ ಒಳಗೆ ನುಗ್ಗಿದ್ದರೆ ಭಾರೀ ಅನಾಹುತವೇ ನಡೆದು ಹೋಗುತ್ತಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ತಹಬದಿಗೆ ತರಲು ಪೊಲೀಸರು ಗೋಲಿಬಾರ್ ನಡೆಸಿದ್ದಾರೆ ಎಂದು ಯಡಿಯೂರಪ್ಪ ಸಮರ್ಥನೆ ನೀಡಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...