Asianet Suvarna News Asianet Suvarna News

ತೆಲಂಗಾಣ ಬೆನ್ನಲ್ಲೇ ಮತ್ತೊಂದು ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು

ದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸೋಮವಾರವಷ್ಟೇ ತೆಲಂಗಾಣ ರಾಜ್ಯ ಸರ್ಕಾರ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ರದ್ದುಗೊಳಿಸಿ, ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ತಮಿಳುನಾಡು ಸಹ ಇದೇ ತೀರ್ಮಾನ ತೆಗೆದುಕೊಂಡಿದೆ.

ಚೆನ್ನೈ, (ಜೂನ್.09): ದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸೋಮವಾರವಷ್ಟೇ ತೆಲಂಗಾಣ ರಾಜ್ಯ ಸರ್ಕಾರ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ರದ್ದುಗೊಳಿಸಿ, ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಿ ಆದೇಶ ಹೊರಡಿಸಿತ್ತು. 

10ನೇ ತರಗತಿ ಪರೀಕ್ಷೆ ಕ್ಯಾನ್ಸಲ್, ವಿದ್ಯಾರ್ಥಿಗಳಿಗೆ ಸಿಕ್ತು ಮುಂದಿನ ಕ್ಲಾಸ್‌ಗೆ ಗ್ರೇಸ್

ಇದರ ಬೆನ್ನಲ್ಲೇ ಇದೀಗ ತಮಿಳುನಾಡು ಸಹ ಇದೇ ತೀರ್ಮಾನ ತೆಗೆದುಕೊಂಡಿದ್ದು, 10 ಮತ್ತು 11ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ, ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಿ ತಮಿಳುನಾಡು ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
 

Video Top Stories