SSLC ಪರೀಕ್ಷೆ ರದ್ದು ಮಾಡುವ ಪ್ರಶ್ನೆಯೇ ಇಲ್ಲ: ಹೀಗೆ ನಡೆಯುತ್ತೆ ಪರೀಕ್ಷೆ
ಕರ್ನಾಟಕದಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷ ಬಗ್ಗೆ ಚರ್ಚೆ ಶುರುವಾಗಿದೆ. ' ಜೂನ್ 25 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತದೆ. ರದ್ದು ಮಾಡುವ ಪ್ರಶ್ನೆಯೇ ಇಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಮಕ್ಕಳ ಸುರಕ್ಷತೆ, ಆತ್ಮ ವಿಶ್ವಾಸಕ್ಕೆ ವಿಶೇಷ ಒತ್ತು ನೀಡಲಾಗುತ್ತದೆ. ಪರೀಕ್ಷಾ ಕೇಂದ್ರ ಕೊಠಡಿ ಸಂಖ್ಯೆ ಜಾಸ್ತಿ ಮಾಡುತ್ತೇವೆ. ಕೊಠಡಿಯಲ್ಲಿ 18 ರಿಂದ 20 ಮಕ್ಕಳಿಗೆ ಮಾತ್ರ ಅವಕಾಶ ಮಾಡಿ ಕೊಡಲಾಗುತ್ತದೆ' ಎಂದರು.
ಬೆಂಗಳೂರು (ಜೂ. 09): ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮಕ್ಕಳಿಗ ಯಾವಾಗ ಪರೀಕ್ಷೆ ನಡೆಸಬೇಕು ಎಂಬ ಗೊಂದಲ ಉಂಟಾಗಿತ್ತು. ತೆಲಂಗಾಣ ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರಗಡೆಗೊಳಿಸುವ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ತಮಿಳುನಾಡು ಸರ್ಕಾರ ಕೂಡಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದುಗೊಳಿಸಿದೆ.
ತೆಲಂಗಾಣ ಬೆನ್ನಲ್ಲೇ ಮತ್ತೊಂದು ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು
ಕರ್ನಾಟಕದಲ್ಲೂ ಈ ಚರ್ಚೆ ಶುರುವಾಗಿದೆ. ಜೂನ್ 25 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತದೆ. ರದ್ದು ಮಾಡುವ ಪ್ರಶ್ನೆಯೇ ಇಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಮಕ್ಕಳ ಸುರಕ್ಷತೆ, ಆತ್ಮ ವಿಶ್ವಾಸಕ್ಕೆ ವಿಶೇಷ ಒತ್ತು ನೀಡಲಾಗುತ್ತದೆ. ಪರೀಕ್ಷಾ ಕೇಂದ್ರ ಕೊಠಡಿ ಸಂಖ್ಯೆ ಜಾಸ್ತಿ ಮಾಡುತ್ತೇವೆ. ಕೊಠಡಿಯಲ್ಲಿ 18 ರಿಂದ 20 ಮಕ್ಕಳಿಗೆ ಮಾತ್ರ ಅವಕಾಶ ಮಾಡಿ ಕೊಡಲಾಗುತ್ತದೆ' ಎಂದರು.