ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಸರ್ಕಾರಿ ಶಾಲೆಗಳು..!
* ಸರ್ಕಾರಿ ಶಾಲೆಗಳಲ್ಲೇ 16 ಲಕ್ಷಕ್ಕೂ ಹೆಚ್ಚು ಮಕ್ಕಳ ಪ್ರವೇಶ
* ನಗರ ಪ್ರದೇಶ ತೊರೆದು ಗ್ರಾಮೀಣ ಪ್ರದೇಶಗಳಿಗೆ ಮುಖ ಮಾಡಿದ ಪೋಷಕರು
* ಶೈಕ್ಷಣಿಕ ವರ್ಷದ ದಾಖಲಾತಿಯಲ್ಲಿ ಹೆಚ್ಚಳ
ಬೆಂಗಳೂರು(ಜು.01): 2020-21 ನೇ ಸಾಲಿನ ಶೈಕ್ಷಣಿಕ ವರ್ಷದ ದಾಖಲಾತಿಯಲ್ಲಿ ಹೆಚ್ಚಳವಾಗಿದೆ. 1ರಿಂದ 10ನೇ ತರಗತಿಗೆವರೆಗೆ ಸರ್ಕಾರಿ ಶಾಲೆಗಳಲ್ಲೇ 16 ಲಕ್ಷಕ್ಕೂ ಹೆಚ್ಚು ಮಕ್ಕಳು ಪ್ರವೇಶ ಪಡೆದಿದ್ದಾರೆ. ಕಳೆದ 15 ದಿನದಿಂದ ಶಿಕ್ಷಕರು ಮನೆ ಮನೆಗೆ ತೆರಳಿ ಮಕ್ಕಳನ್ನ ಶಾಲೆಗೆ ಕರೆ ತರುವಂತ ಕೆಲಸವನ್ನ ಮಾಡುತ್ತಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ನಗರ ಪ್ರದೇಶ ತೊರೆದು ಗ್ರಾಮೀಣ ಪ್ರದೇಶಗಳಿಗೆ ಪೋಷಕರು ಮುಖ ಮಾಡಿದ್ದಾರೆ. ಹೀಗಾಗಿ ಶೈಕ್ಷಣಿಕ ವರ್ಷದ ದಾಖಲಾತಿಯಲ್ಲಿ ಹೆಚ್ಚಳವಾಗಿದೆ.
ಉತ್ತರ ಕನ್ನಡ: ಸಂಪರ್ಕಕ್ಕೆ ಸಿಗದ SSLC ವಿದ್ಯಾರ್ಥಿಗಳು, ಶಿಕ್ಷಕರಿಗೆ ಪತ್ತೇದಾರಿ ಕೆಲಸ!