Hijab Row: ಬುಧವಾರದಿಂದ ಪಿಯು, ಡಿಗ್ರಿ ಕಾಲೇಜುಗಳು ಆರಂಭ
ಸೋಮವಾರದಿಂದ ಪ್ರೌಢಶಾಲೆಗಳನ್ನು ಆರಂಭಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಇದೀಗ ಬುಧವಾರದಿಂದ ಪಿಯು ಮತ್ತು ಪದವಿ ಕಾಲೇಜುಗಳನ್ನು (PU, Degree College) ಪುನರಾರಂಭಿಸುವ ತೀರ್ಮಾನ ಕೈಗೊಂಡಿದೆ.
ಬೆಂಗಳೂರು (ಫೆ. 15): ಸೋಮವಾರದಿಂದ ಪ್ರೌಢಶಾಲೆಗಳನ್ನು ಆರಂಭಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಇದೀಗ ಬುಧವಾರದಿಂದ ಪಿಯು ಮತ್ತು ಪದವಿ ಕಾಲೇಜುಗಳನ್ನು (PU, Degree College) ಪುನರಾರಂಭಿಸುವ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ.
Hijab Row: ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ವಿಚಾರಣೆ ಬೇಡ, ಹೈಕೋರ್ಟ್‌ಗೆ ಅರ್ಜಿ
ಪಿಯು ಮತ್ತು ಪದವಿ ಕಾಲೇಜುಗಳನ್ನು ಬುಧವಾರದಿಂದ ಪ್ರಾರಂಭಿಸುವ ಕುರಿತು ಸ್ಪಷ್ಟನಿರ್ಣಯ ಕೈಗೊಳ್ಳಲಾಗಿದೆ. ಹೈಕೋರ್ಟ್ ಸ್ಪಷ್ಟವಾಗಿ ಹೇಳಿದ್ದು, ಎಲ್ಲೆಲ್ಲಿ ಸಮವಸ್ತ್ರ ಇದೆಯೊ ಅಂತಹ ಕಾಲೇಜುಗಳಲ್ಲಿ ಕಡ್ಡಾಯವಾಗಿ ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು. ಎಲ್ಲೆಲ್ಲಿ ಸಮವಸ್ತ್ರ ಇಲ್ಲವೊ ಅಲ್ಲಿ ಡ್ರೆಸ್‌ಕೋಡ್ ಕುರಿತು ತೀರ್ಮಾನ ಮಾಡಲಾಗುವುದು. ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.