ದ್ವಿತೀಯ ಪಿಯು ಫಲಿತಾಂಶ: ಕಲಾ ವಿಭಾಗದಲ್ಲಿ ಪ್ರಿಯಾಂಕ ರಾಜ್ಯಕ್ಕೆ ಸೆಕೆಂಡ್‌

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಬೆಳಗಾವಿಯ ವಿದ್ಯಾರ್ಥಿನಿಗೆ ದ್ವಿತೀಯ ಸ್ಥಾನ
ಕಲಾ ವಿಭಾಗದಲ್ಲಿ ಪ್ರಿಯಾಂಕ ಟಾಪರ್‌

First Published Apr 22, 2023, 12:58 PM IST | Last Updated Apr 22, 2023, 12:58 PM IST

ಬೆಳಗಾವಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕುಂದಾನಗರಿಯ ಪ್ರಿಯಾಂಕ ಕುಲಕರ್ಣಿ ಎಂಬ ವಿದ್ಯಾರ್ಥಿನಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ಈ ಮೂಲಕ ಪ್ರಿಯಾಂಕ ಅಪೂರ್ವ ಸಾಧನೆಯನ್ನು ಮಾಡಿದ್ದಾರೆ. ಈ ಬಗ್ಗೆ ವಿದ್ಯಾರ್ಥಿನಿ ಪ್ರಿಯಾಂಕ ಮಾತನಾಡಿ, ರಾಜ್ಯಕ್ಕೆ ದ್ವಿತೀಯ ಸ್ಥಾನ ಬಂದಿರುವುದರಿಂದ ನನಗೆ ತುಂಬಾ ಸಂತೋಷವಾಗಿದೆ. ನಾನು ಪ್ರತಿದಿನ ಬೆಳಗ್ಗೆ ಹೆಚ್ಚು ಓದುತ್ತಿದ್ದೆ, ಅಲ್ಲದೇ ನಾಲ್ಕರಿಂದ ಐದು ಗಂಟೆ  ಅಭ್ಯಾಸವನ್ನು ಮಾಡುತ್ತಿದ್ದೆ. ನನಗೆ ಪ್ರತಿಯೊಬ್ಬ ಶಿಕ್ಷಕರು ಸಹ ತುಂಬಾ ಪ್ರೋತ್ಸಾಹ ನೀಡಿದ್ದಾರೆ. ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿರುವ ಪ್ರಿಯಾಂಕ ಯುಪಿಎಸ್‌ಸಿ ಪರೀಕ್ಷೆಯನ್ನು ಪಾಸ್‌ ಮಾಡುವ ಗುರಿಯನ್ನು ಹೊಂದಿದ್ದಾರೆ.

ಇದನ್ನೂ ವೀಕ್ಷಿಸಿ: ನಿತ್ಯ 50 ಕಿ.ಮೀ. ಪ್ರಯಾಣಿಸಿ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ನಂ.2 ಸ್ಥಾನ ಪಡೆದ ಕೃಷಿ ಕಾರ್ಮಿಕನ ಪುತ್ರಿ!

Video Top Stories