SSLC Toppers: ಎಸ್‌ಎಸ್‌ಎಲ್‌ಸಿ ಟಾಪರ್ ಸಕ್ಸಸ್‌ ಮಂತ್ರ, ಭೂಮಿಕಾ ಪೈ ಹೇಳಿದ್ದಿಷ್ಟು

ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ಮೆಕಾಲೆ ಖಾಸಗಿ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ಆರ್. ಪೈ - 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದು, ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

First Published May 8, 2023, 7:27 PM IST | Last Updated May 8, 2023, 7:27 PM IST

ಉಡುಪಿ (ಮೇ.8): ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ಮೆಕಾಲೆ ಖಾಸಗಿ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ಆರ್. ಪೈ - 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದಾಳೆ.  ಈ ವಿದ್ಯಾರ್ಥಿನಿಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಕುಟುಂಬ ಸದಸ್ಯರಿಂದ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ.  ಭೂಮಿಕಾ ಪೈ ಅವರು ಮೂಲತಃ ಉಡುಪಿಯವರಾಗಿದ್ದಾರೆ.

SSLC TOPPERS 2023 ಇವರೇ ನೋಡಿ: ಪೂರಕ ಪರೀಕ್ಷೆಗೆ ಮೇ 15ರೊಳಗೆ ಅರ್ಜಿ ಸಲ್ಲಿಸಿ

 ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ 8,35,102 ಜನ ವಿದ್ಯಾರ್ಥಿಗಳ ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 7,00,619 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದು, 1,34,483 ಅನುತ್ತೀರ್ಣರಾಗಿದ್ದಾರೆ. ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಧೃತಿಗೆಡದೇ ಮೇ 15ರೊಳಗೆ ಸಪ್ಲಿಮೆಂಟರಿ ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡು ಮತ್ತೊಮ್ಮೆ ಪರೀಕ್ಷೆ ಬರೆದು ಉತ್ತೀರ್ಣರಾಗಬಹುದು.

Video Top Stories