ಸಿಎಂ ಮಧ್ಯಪ್ರವೇಶಿಸಿ ಪಠ್ಯಪುಸ್ತಕ ವಿವಾದಕ್ಕೆ ತೆರೆ ಎಳೆಯಬೇಕು Baraguru Ramachandrappa
ವಿವಾದ ಬಗೆಹರಿಸಲು ಮುಖ್ಯಮಂತ್ರಿ ಗಳು ಕೂಲಂಕುಶ ಪರಿಶೀಲಿಸಿ ವಿವಾದಕ್ಕೆ ತೆರೆ ಎಳೆಯಬೇಕು. ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಷೇತ್ರದ ಬಗ್ಗೆ ಬೇಸರ ಬರಬಾರದು ಎಂದು ಬರಗೂರು ರಾಮಚಂದ್ರಪ್ಪ ಮನವಿ ಮಾಡಿದ್ದಾರೆ.
ಬೆಂಗಳೂರು (ಮೇ.29): ಪಠ್ಯ ಪುಸ್ತಕ ಮರು ಪರಿಷ್ಕರಣಾವಿವಾದಕ್ಕೆ ಸಂಬಂಧಿಸಿ ಮಾತನಾಡಿರುವ ಸಾಹಿತಿ ಬರಗೂರು ರಾಮಚಂದ್ರಪ್ಪ (Baraguru Ramachandrappa) ಶೈಕ್ಷಣಿಕ (Education) ಘನತೆ ಉಳಿಯಬೇಕು ಎಂಬುದು ನನ್ನ ಕಳಕಳಿ ಎಂದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಮಾನ್ಯ ಮುಖ್ಯಮಂತ್ರಿ ಗಳು ಮಧ್ಯಪ್ರವೇಶ ಮಾಡಬೇಕು. ಶೈಕ್ಷಣಿಕ ಘನತೆ ಉಳಿಯಲು ಮುಖ್ಯಮಂತ್ರಿಗಳ ಮಧ್ಯಪ್ರವೇಶ ಅನಿವಾರ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪಠ್ಯಪುಸ್ತಕ ಪರಿಷ್ಕರಣೆ (Text Books Revision) ನಮ್ಮ ಕಾಲದಲ್ಲು ಆಗಿತ್ತು. ಅದು ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು ಹಾಗು ಸಂವಿಧಾನದ ಆಶಯಗಳಿಗನುಗುಣವಾಗಿ ನಡೆದಿತ್ತು. ಆದ್ರೆ ಏಕೆ ಸೇರಿಸಿದ್ದಿವಿ ಏಕೆ ಬಿಟ್ಟಿದ್ದೇವೆ ಎಂಬುದಕ್ಕೆ ಕಾರಣ ನೀಡಿದ್ದೇವೆ. ಆದ್ರೆ ಈ ಬಾರಿ ಪಠ್ಯಪುಸ್ತಕ ಪರಿಷ್ಕರಣೆ ಆಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಹಾಗು ಸಂವಿಧಾನ ಆಶಯಕ್ಕೆ ಪಠ್ಯಪುಸ್ತಕ ರಚನೆ ಆಗಬಾರದು.
CET 2022ಗೆ ಅರ್ಜಿ ಸಲ್ಲಿಸಲು ಕೊನೆ ಅವಕಾಶ, 2 ದಿನ ವಿಂಡೋ ರೀ ಓಪನ್
ಅನೇಕ ವೈಯಕ್ತಿಕ ವಾಗಿ ತೇಜೋವಧೆ ಮಾತುಗಳು ಬರುತ್ತಿರುವುದರಿಂದ ನಾನು ಆ ಮಟ್ಟಕ್ಕೆ ಇಳಿಯುವುದಿಲ್ಲ.ಅನೇಕ ಮುಖ್ಯಪಠ್ಯಗಳು ಕೈಬಿಟ್ಟಿರುವುದರಿಂದ ಕನ್ನಡ ವಿದ್ಯಾರ್ಥಿಗಳು ಅನ್ಯಾಯವಾಗುತ್ತದೆ. ಈ ವಿವಾದ ಬಗೆಹರಿಸಲು ಮುಖ್ಯಮಂತ್ರಿ ಗಳು ಕೂಲಂಕುಶ ಪರಿಶೀಲಿಸಿ ವಿವಾದಕ್ಕೆ ತೆರೆ ಎಳೆಯಬೇಕು. ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಷೇತ್ರದ ಬಗ್ಗೆ ಬೇಸರ ಬರಬಾರದು. ಅದಕ್ಕಾಗಿ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಬೇಕೆಂದು ಬರಗೂರು ಮನವಿ ಮಾಡಿದ್ದಾರೆ.