ಫಲಿತಾಂಶ ಬಂದಾಯ್ತು, ಇದೀಗ SSLC ವಿಜ್ಞಾನ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ..?

ಕಳೆದ ಏಪ್ರಿಲ್‌ ತಿಂಗಳಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಕುರಿತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮಾಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

First Published May 25, 2022, 11:25 AM IST | Last Updated May 25, 2022, 11:25 AM IST

ಬೆಂಗಳೂರು (ಮೇ. 25): ಕಳೆದ ಏಪ್ರಿಲ್‌ ತಿಂಗಳಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಕುರಿತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮಾಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾಗಡಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಣ್ಣಸ್ವಾಮಿ ಎಂಬುವರು ಈ ಕುರಿತು ದೂರು ನೀಡಿದ್ದು ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳವಂತೆ ಮನವಿ ಮಾಡಿದ್ದಾರೆ.

ಮಾರ್ಚ್ 28ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು. ಅದರಂತೆ ಏ.11ರಂದು ವಿಜ್ಞಾನ ವಿಷಯದ ಪರೀಕ್ಷೆ ಸಹ ನಡೆದಿದ್ದು, ಪರೀಕ್ಷೆಗೂ ಮುನ್ನ ಈ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.