Schools Reopen: 5-9 ನೇ ತರಗತಿಗಳು ಪುನಾರಂಭ.? ಶಿಕ್ಷಣ ಸಚಿವರ ಸ್ಪಷ್ಟನೆ
'ಪಾಸಿಟಿವ್ ಕೇಸ್ ಬಂದ ಶಾಲೆಗಳನ್ನು ಬಂದ್ ಮಾಡಲು ಸೂಚನೆ ನೀಡಲಾಗಿದೆ. ಉಳಿದಂತೆ ರಾಜ್ಯದ ಹಲವೆಡೆ ಶಾಲೆಗಳು ನಡೆಯುತ್ತಿದೆ. ಶಾಲೆ ಬಂದ್ ಬೇಡ ಎಂದು ತಜ್ಞರೂ ಅಭಿಪ್ರಾಯಪಟ್ಟಿದ್ದಾರೆ. ಶುಕ್ರವಾರದ ಸಭೆ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದೇವೆ' ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ (BC Nagesh)ಹೇಳಿದ್ದಾರೆ.
ಬೆಂಗಳೂರು (ಜ. 19): ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಿಕ್ಷಣ ಸಂಸ್ಥೆಗಳಿಗೆ ಪ್ರತ್ಯೇಕ ಕೋವಿಡ್ ಕೋವಿಡ್ ನಿಯಂತ್ರಣ ಮಾರ್ಗಸೂಚಿಯೊಂದಿಗೆ (SOP) ಶಾಲೆ (School) ಕಾಲೇಜುಗಳನ್ನು (College) ಆರಂಭಿಸಲು ಅನುಮತಿ ನೀಡಬೇಕೆಂದು ಕರ್ನಾಟಕ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್) ಸರ್ಕಾರಕ್ಕೆ ಮನವಿ ಮಾಡಿದೆ.
'ಪಾಸಿಟಿವ್ ಕೇಸ್ ಬಂದ ಶಾಲೆಗಳನ್ನು ಬಂದ್ ಮಾಡಲು ಸೂಚನೆ ನೀಡಲಾಗಿದೆ. ಉಳಿದಂತೆ ರಾಜ್ಯದ ಹಲವೆಡೆ ಶಾಲೆಗಳು ನಡೆಯುತ್ತಿದೆ. ಶಾಲೆ ಬಂದ್ ಬೇಡ ಎಂದು ತಜ್ಞರೂ ಅಭಿಪ್ರಾಯಪಟ್ಟಿದ್ದಾರೆ. ಶುಕ್ರವಾರದ ಸಭೆ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದೇವೆ' ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.