Covid 19 Spike in Schools: ಒಂದೇ ವಾರದಲ್ಲಿ 850 ಮಕ್ಕಳು, 37 ಶಿಕ್ಷಕರಿಗೆ ಸೋಂಕು

ರಾಜ್ಯದ ಶಾಲಾ-ಕಾಲೇಜುಗಳಲ್ಲಿ (Schools-College) ಕೋವಿಡ್‌ ಮಹಾಮಾರಿ ಆರ್ಭಟ ಮುಂದುವರೆದಿದ್ದು, ಮಂಗಳವಾರ ಮತ್ತೆ 208ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕಳೆದೊಂದು ವಾರದಲ್ಲಿ ರಾಜ್ಯದಲ್ಲಿ 850ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸೋಂಕು ತಗಲಿದಂತಾಗಿದೆ.
 

First Published Jan 12, 2022, 2:02 PM IST | Last Updated Jan 12, 2022, 2:24 PM IST

ಬೆಂಗಳೂರು (ಜ. 12): ರಾಜ್ಯದ ಶಾಲಾ-ಕಾಲೇಜುಗಳಲ್ಲಿ (Schools-College) ಕೋವಿಡ್‌ ಮಹಾಮಾರಿ ಆರ್ಭಟ ಮುಂದುವರೆದಿದ್ದು, ಮಂಗಳವಾರ ಮತ್ತೆ 208ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕಳೆದೊಂದು ವಾರದಲ್ಲಿ ರಾಜ್ಯದಲ್ಲಿ 850ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸೋಂಕು ತಗಲಿದಂತಾಗಿದೆ.

Covid 19 Spike: ಶಾಲಾ- ಕಾಲೇಜುಗಳ ಬಂದ್ ಮಾಡುವ ನಿರ್ಧಾರ ಆಯಾ ಜಿಲ್ಲೆಗಳ ಡಿಸಿಗಳದ್ದು: ಶಿಕ್ಷಣ ಸಚಿವ

ತುಮಕೂರು ಜಿಲ್ಲೆಯಲ್ಲಿ ಮಂಗಳವಾರ ಅತಿ ಹೆಚ್ಚು 54 ವಿದ್ಯಾರ್ಥಿಗಳಿಗೆ ಸೋಂಕು ಪತ್ತೆಯಾಗಿದೆ. ಶಿರಾ ತಾಲೂಕಿನ ಅಂಬೇಡ್ಕರ್‌ ವಸತಿ ಶಾಲೆಯ 38 ಹಾಗೂ ಮಧುಗಿರಿಯ ನರ್ಸಿಂಗ್‌ ಕಾಲೇಜಿನ 16 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ಬಳ್ಳಾರಿಯ ವಿಮ್ಸ್‌ನ 24 ವಿದ್ಯಾರ್ಥಿಗಳಲ್ಲಿ ಸೋಮವಾರ ಪಾಸಿಟಿವ್‌ ಕಂಡುಬಂದಿದ್ದು, ಇದರೊಂದಿಗೆ ಒಟ್ಟು ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ 55ಕ್ಕೆ ತಲುಪಿದೆ. ಇನ್ನುಳಿದಂತೆ ಹಾವೇರಿ ಜಿಲ್ಲೆಯ ದೇವಗಿರಿಯ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ 1, ಕೊಪ್ಪಳ ತಾಲೂಕಿನ ಘಟರಟ್ಟಿಹಾಳದ ಸರ್ಕಾರಿ ಪ್ರಾಥಮಿಕ ಶಾಲೆಯ 2, ಗಂಗಾವತಿಯ ಖಾಸಗಿ ಪಿಯು ಕಾಲೇಜಿನಲ್ಲಿ 1 ವಿದ್ಯಾರ್ಥಿ, ಧಾರವಾಡ ತಾಲೂಕಿನ ಅಮ್ಮಿನಭಾವಿಯ ಶಾಂತೇಶ್ವರ ಪ್ರೌಢಶಾಲೆಯ 14 ವಿದ್ಯಾರ್ಥಿಗಳು ಸೋಂಕಿತರಾಗಿದ್ದಾರೆ.