ರಾಜ್ಯದಲ್ಲಿ ಧ್ಯಾನ ದಂಗಲ್: ಸಿದ್ದರಾಮಯ್ಯಗೆ ಕುಟುಕಿದ ಸಚಿವ ನಾಗೇಶ್
ಶಾಲೆಗಳಲ್ಲಿ ಧ್ಯಾನದ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್ ನಡೆಯುತ್ತಿದೆ.
ಶಾಲೆಗಳಲ್ಲಿ ಧ್ಯಾನದ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್ ನಡೆಯುತ್ತಿದೆ. ಕೊರೊನಾ ಸಮಯದಲ್ಲಿ ಮಕ್ಕಳಿಗೆ ಆನ್ ಲೈನ್ ಕ್ಲಾಸ್ ಎಂದು ಮೊಬೈಲ್ ಹುಚ್ಚು ಹಚ್ಚಲಾಗಿದೆ. ಈಗ ಆ ಮೊಬೈಲ್ ಹುಚ್ಚು ಬಿಡಿಸುಲು ಈ ಧ್ಯಾನ ಯೋಗ ನಾ..? ಬಿ.ಸಿ.ನಾಗೇಶ್ ಶಿಕ್ಷಣ ಸಚಿವರಾಗಿದ್ದಾಗಿಂದ ಒಂದಲ್ಲ ಒಂದು ಸಮಸ್ಯೆಗಳು ಎದುರಾಗಿದೆ. ಪಠ್ಯ ಪುಸ್ತಕ ವಿವಾದ, ಶಿಕ್ಷಕರ ನೇಮಕಾತಿ ಹಗರಣ ಇವೆಲ್ಲ ನಡೆದಿದೆ. ಮಕ್ಕಳು ಆಟ ಆಡುತ್ತ ಕುಣಿಯುತ್ತ ಪಾಠ ಕೇಳುತ್ತ ಬೇಳೆಯಬೇಕು. ಆದ್ರೆ ಸರ್ಕಾರ ಬಲವಂತವಾಗಿ ಮಕ್ಕಳನ್ನು ಕೊಣೆಯಲ್ಲಿ ಕೂಡಿ ಹಾಕಿ ಧ್ಯಾನ ಯೋಗ ಮಾಡಿಸೊಕ್ಕೆ ಹೊರಟಿದೆ. ಮಕ್ಕಳಿಗಿಂದ ಶಿಕ್ಷಣ ಸಚಿವರಿಗೆ ಯೋಗ ಧ್ಯಾನದ ಅವಶ್ಯಕತೆ ಇದೆ ಎಂದು ಹೇಳಿದ್ದರು.
ಶಾಲೆ-ಕಾಲೇಜಿನಲ್ಲಿ ಧ್ಯಾನ , ಶಿಕ್ಷಣ ಸಚಿವರ ವಿರುದ್ದ ಸಿದ್ದರಾಮಯ್ಯ ಟ್ವೀಟ್ ವಾರ್
ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಯಾಗಿ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಸಚಿವ ಬಿ.ಸಿ. ನಾಗೇಶ್ ಅವರು, ಮಾನ್ಯ ಸಿದ್ದರಾಮಯ್ಯನವರೇ ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರವಾಗಿದೆ. ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ? ಅಂತ ಪ್ರಶ್ನೆ ಮಾಡಿದ್ದಾರೆ.