Udupi Hijab Case: ಉಡುಪಿಯ ಹಿಜಾಬ್‌ ಗಲಾಟೆಗೆ ಶಿಕ್ಷಣ ಸಚಿವರ ಪ್ರತಿಕ್ರಿಯೆ

ಹಿಜಾಬ್‌ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಈ ಅಭ್ಯಾಸವು ಅಶಿಸ್ತು ಆಗಿದೆ ಮತ್ತು ಶಾಲೆಗಳು ಮತ್ತು ಕಾಲೇಜುಗಳು ಧರ್ಮವನ್ನು ಆಚರಿಸುವ ಸ್ಥಳವಲ್ಲ  ಎಂದು ತಿಳಿಸಿದ್ದಾರೆ.

First Published Jan 23, 2022, 1:18 PM IST | Last Updated Jan 23, 2022, 1:18 PM IST

ಬೆಂಗಳೂರು(ಜ.23):  ಉಡುಪಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜೊಂದರಲ್ಲಿ ಉದ್ಭವಿಸಿರುವ ‘ಹಿಜಾಬ್‌’ (ಶಿರವಸ್ತ್ರ) ವಿವಾದ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೂ ಸಮವಸ್ತ್ರ ಪರಿಚಯಿಸಬಹುದಾ ಎಂಬ ಬಗ್ಗೆ ಸರ್ಕಾರದ ಮುಂದೆ ಪ್ರಸ್ತಾವನೆ ಇಡಲು ಇಲಾಖೆ ಮುಂದಾಗಿದೆ. ಕೆಲವು ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಈ ಕುರಿತು ಬೇಡಿಕೆ ಇಟ್ಟು ಮೂರು ವಾರಗಳಿಂದ ತರಗತಿಯಿಂದ ಹೊರಗೆ ಉಳಿದಿದ್ದಾರೆ. 

Hijab Controversy: ಹಿಜಾಬ್‌ ವಿವಾದ ತಡೆಗೆ ಪಿಯುಸಿಗೂ ಸಮವಸ್ತ್ರ?

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಈ ಕುರಿತು ಮಾತನಾಡಿದ್ದು, "ಈ ಅಭ್ಯಾಸವು ಅಶಿಸ್ತು ಆಗಿದೆ ಮತ್ತು ಶಾಲೆಗಳು ಮತ್ತು ಕಾಲೇಜುಗಳು ಧರ್ಮವನ್ನು ಆಚರಿಸುವ ಸ್ಥಳವಲ್ಲ" ಎಂದು ತಿಳಿಸಿದ್ದಾರೆ. "ಕಾಲೇಜಿನ ಕ್ಯಾಂಪಸ್‌ನಲ್ಲಿರುವ ಕೆಲವು ಜನರು ಈ ವಿಚಾರವನ್ನು ರಾಜಕೀಯಗೊಳಿಸುತ್ತಿದ್ದಾರೆ. 2023ರಲ್ಲಿ ಚುನಾವಣೆ ಹಿನ್ನಲೆಯಲ್ಲಿ ಅನಗತ್ಯವಾಗಿ ಗೊಂದಲ ಎಬ್ಬಿಸುತ್ತಿದ್ದಾರೆ. ವಿದ್ಯಾರ್ಥಿಗಳು ಈಗ ಸಾಂವಿಧಾನಿಕ ಹಕ್ಕುಗಳನ್ನು ಏಕೆ ಅಭ್ಯಾಸ ಮಾಡಲು ಬಯಸುತ್ತಾರೆ? " ಎಂದು ಪ್ರಶ್ನಿಸಿದ್ದಾರೆ.

Video Top Stories