
ಹಿಜಾಬ್ ಇಲ್ಲದೆ ಪರೀಕ್ಷೆಯಿಂದ ದೂರ ಉಳಿದ ವಿದ್ಯಾರ್ಥಿಗಳು, ಈ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ
ಹಿಜಾಬ್ ತೀರ್ಪು ಬಗ್ಗೆ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಹಿಜಾಬ್ ಇಲ್ಲದೇ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಯಿಂದ ದೂರ ಉಳಿದಿದ್ದಾರೆ. ಈ ಬಗ್ಗೆ ಸದನದಲ್ಲಿ ಚರ್ಚೆಯಾಗಿದ್ದು ಹೀಗೆ...
ಬೆಂಗಳೂರು, (ಮಾ.17): ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲಎಂದು ಹೈಕೋರ್ಟ್ ಪೂರ್ಣ ಪೀಠದಿಂದ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರು ಹಿಜಾಬ್ (Hijab Row) ಧರಿಸುವುದು ಕಡ್ಡಾಯವಲ್ಲ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ರವನ್ನು ಒಳಗೊಂಡ ಪೂರ್ಣ ಪೀಠ. ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಸಮವಸ್ತ್ರದ ಜತೆ ಹಿಜಾಬ್ಗೆ ಅನುಮತಿ ಕೋರಿ ಸಲ್ಲಿಸಿದ್ದ, ರಿಟ್ ಅರ್ಜಿಗಳನ್ನು ಹೈಕೋರ್ಟ್ ಪೂರ್ಣ ಪೀಠ ವಜಾಗೊಳಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹಿಜಾಬ್ ಬೆಂಬಲಿಸಿ ಬಂದ್‌ಗೆ ಕರೆ, ಸದನದಲ್ಲಿ ಮಾಜಿ ಸಿಎಂ ಆಕ್ರೋಶ
ಇದೀಗ ಹಿಜಾಬ್ ತೀರ್ಪು ಬಗ್ಗೆ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಹಿಜಾಬ್ ಇಲ್ಲದೇ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಯಿಂದ ದೂರ ಉಳಿದಿದ್ದಾರೆ. ಈ ಬಗ್ಗೆ ಸದನದಲ್ಲಿ ಚರ್ಚೆಯಾಗಿದ್ದು ಹೀಗೆ...