Asianet Suvarna News Asianet Suvarna News

ಇನ್ನೂ ಒಂದು ತಿಂಗಳು ಶಾಲೆ ಆರಂಭ ಡೌಟ್?

Oct 8, 2020, 10:50 AM IST

ಬೆಂಗಳೂರು (ಅ. 08): ಕೊರೊನಾ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಕನಿಷ್ಠ 1 ತಿಂಗಳು ಶಾಲೆ ತೆರೆಯುವುದು ಸೂಕ್ತವಲ್ಲ' ಎಂದು ಆರೋಗ್ಯ ಇಲಾಖೆ ನಿರ್ದೇಶಕ ಓಂ ಪ್ರಕಾಶ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. 

ಕೊರೊನಾ ಪೀಡಿತ ಜಿಲ್ಲೆಗಳಲ್ಲಿ ಟಫ್ ರೂಲ್ಸ್?

ಕೋವಿಡ್ ಸೋಂಕು ಹೆಚ್ಚಾಗುತ್ತಿರುವುದರಿಂದ ಜನಸಾಮಾನ್ಯರು ಇದನ್ನು ನಿರ್ಲಕ್ಷಿಸಬಾರದು. ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಇನ್ನು ಶಾಲೆಗಳನ್ನು ಆರಂಭಿಸುವ ಬಗ್ಗೆ ಸಾಕಷ್ಟು ಚರ್ಚೆ ನಡೆಸಬೇಕು. ಶಾಲೆ ಆರಂಭದ ಬಗ್ಗೆ ಮರುವಿಮರ್ಶೆ ಮಾಡಬೇಕು' ಎಂದು ಸಲಹೆ ನೀಡಿದ್ದಾರೆ.