ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ SSLC ಪೂರಕ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್
ಅಂದು ಆತ್ಮಹತ್ಯೆಗೆ ಯತ್ನಿಸಿದ್ದ ಗ್ರೀಷ್ಮಾ ನಾಯಕ್ ಇಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾರೆ. 625 ಅಂಕಗಳಿಗೆ 599 ಅಂಕ ಗಳಿಸಿದ್ದಾಳೆ.
ತುಮಕೂರು (ಅ. 11): ಅಂದು ಆತ್ಮಹತ್ಯೆಗೆ ಯತ್ನಿಸಿದ್ದ ಗ್ರೀಷ್ಮಾ ನಾಯಕ್ ಇಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾರೆ. 625 ಅಂಕಗಳಿಗೆ 599 ಅಂಕ ಗಳಿಸಿದ್ದಾಳೆ.
4 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳು 'ನಾಪತ್ತೆ'!
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶ ಸಿಗದೇ ಗ್ರೀಷ್ಮಾ ಆತ್ಮಹತ್ಯೆಗೆ ಯತ್ನಿಸಿದ್ದಳು. ಅಂದು ಶಿಕ್ಷಣ ಸಚಿವ ಸುರೇಶ್ ಕುಮಾರ್, ಗ್ರೀಷ್ಮಾ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದರು. ಮೂಡಬಿದ್ರೆ ಆಳ್ವಾಸ್ ಇಂಗ್ಲೀಷ್ ಸ್ಕೂಲ್‌ನಲ್ಲಿ ಗ್ರೀಷ್ಮಾ ಓದುತ್ತಿದ್ದಳು. ಶಾಲಾ ದಾಖಲಾತಿ ಸಮಸ್ಯೆಯಿಂದ ಹಾಲ್ ಟಿಕೆಟ್ ಸಿಕ್ಕಿರಲಿಲ್ಲ. ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಳು.