Hijab Row ಮತ್ತೋರ್ವ ವಕೀಲ ಎಂಟ್ರಿ, ಕೋರ್ಟ್‌ನಲ್ಲಿ ಕಾವೇರಿದ ಹಿಜಾಬ್ ವಾದ-ಪ್ರತಿವಾದ

ಯಾವುದೇ ಧರ್ಮದ ಸಂಕೇತವನ್ನು ಶಾಲಾ-ಕಾಲೇಜಿನಿಲ್ಲಿ ಧರಿಸುವಂತಿಲ್ಲ ಎಂದ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಅಂತಿಮವಾಗಿ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂದು ಇಡೀ ರಾಜ್ಯ ಕಾದು ಕುಳಿತಿದೆ. ಆದ್ರೆ, ಅಂತಿಮ ತೀರ್ಪು ಇನ್ನಷ್ಟು ದಿನ ವಿಳಂಬವಾಗುವ ಸಾಧ್ಯತೆಗಳಿವೆ. ಯಾಕಂದ್ರೆ ಕೋರ್ಟ್‌ನಲ್ಲಿ ಈ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದು, ಒಂದು ಅರ್ಜಿಯ ಪರ ಒಬ್ಬೊಬ್ಬ ವಕೀಲ ವಾದ ಮಂಡಿಸುತ್ತಿದ್ದಾರೆ. ದೇವದತ್ ಕಾಮತ್ ವಾದ ಮಂಡನೆ ಮುಗಿದೆ. ಇದೀಗ ಅರ್ಜಿದಾರರ ಪರವಾಗಿ ಮತ್ತೋರ್ವ ವಕೀಲ ರೆಹಮತ್ ಉಲ್ಲಾ ಕೊತ್ವಾಲ್‌ ಅವರು ಹೈಕೋರ್ಟ್ ತ್ರಿದಸ್ಯ ಪೀಠದ ಮುಂದೆ ತಮ್ಮ ವಾದ ಮಂಡಿಸುತ್ತಿದ್ದಾರೆ.

First Published Feb 17, 2022, 5:49 PM IST | Last Updated Feb 17, 2022, 5:49 PM IST

ಬೆಂಗಳೂರು, (ಫೆ.17):  ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ( High Court ) ಮಧ್ಯಂತರ ಆದೇಶ ನೀಡಿದ್ದರೂ, ಕೋರ್ಟ್ ಆದೇಶಕ್ಕೆ ಡೋಂಟ್ ಕೇರ್ ಎನ್ನುವಂತೆ ವಿದ್ಯಾರ್ಥಿಗಳು  ಹಿಜಾಬ್ ಧರಿಸಿಯೇ ( Hijab Row ) ಕಾಲೇಜುಗಳಿಗೆ ಆಗಮಿಸಿದ್ದಾರೆ.  ನಿನ್ನೆಯಿಂದ (ಫೆ.16) ಆರಂಭವಾದ ಕಾಲೇಜುಗಳಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಹಿಜಾಬ್ ಬಿಡಲ್ಲ ಅಂತ ಕೆಲ ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿವೆ. 

Hijab Row ಮಂಡ್ಯದ ಮದ್ದೂರಿನ ಪ್ರೌಢ ಶಾಲೆಯೊಂದರಲ್ಲಿ ಹಿಜಾಬ್ ವಿಚಾರಕ್ಕೆ ಗಲಾಟೆ, ಗದ್ದಲ

ಇನ್ನು ಯಾವುದೇ ಧರ್ಮದ ಸಂಕೇತವನ್ನು ಶಾಲಾ-ಕಾಲೇಜಿನಿಲ್ಲಿ ಧರಿಸುವಂತಿಲ್ಲ ಎಂದ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಅಂತಿಮವಾಗಿ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂದು ಇಡೀ ರಾಜ್ಯ ಕಾದು ಕುಳಿತಿದೆ. ಆದ್ರೆ, ಅಂತಿಮ ತೀರ್ಪು ಇನ್ನಷ್ಟು ದಿನ ವಿಳಂಬವಾಗುವ ಸಾಧ್ಯತೆಗಳಿವೆ.

ಯಾಕಂದ್ರೆ ಕೋರ್ಟ್‌ನಲ್ಲಿ ಈ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದು, ಒಂದು ಅರ್ಜಿಯ ಪರ ಒಬ್ಬೊಬ್ಬ ವಕೀಲ ವಾದ ಮಂಡಿಸುತ್ತಿದ್ದಾರೆ. ದೇವದತ್ ಕಾಮತ್ ವಾದ ಮಂಡನೆ ಮುಗಿದೆ. ಇದೀಗ ಅರ್ಜಿದಾರರ ಪರವಾಗಿ ಮತ್ತೋರ್ವ ವಕೀಲ ರೆಹಮತ್ ಉಲ್ಲಾ ಕೊತ್ವಾಲ್‌ ಅವರು ಹೈಕೋರ್ಟ್ ತ್ರಿದಸ್ಯ ಪೀಠದ ಮುಂದೆ ತಮ್ಮ ವಾದ ಮಂಡಿಸುತ್ತಿದ್ದಾರೆ.