ಹಿಜಾಬ್ ಧರಿಸುವುದು ಧಾರ್ಮಿಕ ಹಕ್ಕು ಎಂಬುದಕ್ಕೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲ: ಎಜಿ ನಾವದಗಿ
ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸುವುದನ್ನು ನಿರ್ಬಂಧಿಸಿದ್ದ ಕ್ರಮ ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿದ್ದ ವಿಸ್ತೃತ ಪೀಠ ವಾದ ಆಲಿಸಿತು.
ಬೆಂಗಳೂರು (ಫೆ. 22): ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸುವುದನ್ನು ನಿರ್ಬಂಧಿಸಿದ್ದ ಕ್ರಮ ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿದ್ದ ವಿಸ್ತೃತ ಪೀಠ ಸೋಮವಾರ ಸುಮಾರು ಎರಡು ಗಂಟೆಗಳ ವಾದ ಆಲಿಸಿತು.
Hijab Row: ನಮಗೆ ಹಿಜಾಬ್‌ಗಿಂತಲೂ ಶಿಕ್ಷಣವೇ ಮುಖ್ಯ, ವಿದ್ಯಾರ್ಥಿನಿಯರ ಮಾದರಿ ನಡೆ
ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮಿಕ ಹಕ್ಕು ಎಂಬ ಬಗ್ಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ. ಈ ಬಗ್ಗೆ ಸ್ಪಷ್ಟವಾದ ವಿವರಣೆ ಇಲ್ಲ. ಅಲ್ಲದೆ, ಶಿಕ್ಷಣದಲ್ಲಿ ಆಂತರಿಕ ಶಿಸ್ತು ಕಾಪಾಡುವ ಅಧಿಕಾರ ಆಯಾ ಶಿಕ್ಷಣ ಸಂಸ್ಥೆಗಳಿಗಿದೆ. ಶಿರೂರು ಮಠ, ಅಜ್ಮೀರ್ ದರ್ಗಾ, ತ್ರಿವಳಿ ತಲಾಖ್, ಶಬರಿಮಲೆ ತೀರ್ಪುಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ನ್ಯಾಯಾಲಯಗಳು ತೀರ್ಮಾನಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮಿಕ ಹಕ್ಕು ಎಂಬ ಪ್ರಶ್ನೆ ಇತ್ಯರ್ಥವಾಗಬೇಕು ಎಂದರು.