Hijab Verdict: ಶಿವಮೊಗ್ಗ, ಉಡುಪಿ ಕಾಲೇಜು ಆವರಣದಲ್ಲಿ 144 ಸೆಕ್ಷನ್ ಜಾರಿ
ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಪ್ರಕಟವಾದ ಬೆನ್ನಲ್ಲೇ, ಶಿವಮೊಗ್ಗ, ಉಡುಪಿ ಕಾಲೇಜು ಆವರಣದಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಕಾಲೇಜು ಸುತ್ತ 5 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಬೆಂಗಳೂರು (ಮಾ. 16): ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಪ್ರಕಟವಾದ ಬೆನ್ನಲ್ಲೇ, ಶಿವಮೊಗ್ಗ, ಉಡುಪಿ ಕಾಲೇಜು ಆವರಣದಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಕಾಲೇಜು ಸುತ್ತ 5 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಿದ್ದಾರೆ. ಶಿವಮೊಗ್ಗ, ಉಡುಪಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ದೇಶಾದ್ಯಂತ ತೀವ್ರ ಚರ್ಚೆ ಹುಟ್ಟುಹಾಕಿದ್ದ ಹಿಜಾಬ್ ಪ್ರಕರಣ ಕುರಿತ ಹೈಕೋರ್ಟ್ ಆದೇಶ ಹೊರಬಿದ್ದಿದ್ದು, ಶಾಲಾ ಕಾಲೇಜಿನ ತರಗತಿಗಳಿಗೆ ಹಿಜಾಬ್ ಧರಿಸಿ ಹಾಜರಾಗುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ 2022 ಫೆ.5ರಂದು ಹೊರಡಿಸಿದ್ದ ಆದೇಶವನ್ನು ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ.