Hijab Verdict: ಸುಪ್ರೀಂ ಅಂಗಳಕ್ಕೆ ಹಿಜಾಬ್, ಹೋರಾಟ ಮುಂದುವರೆಸುತ್ತೇವೆ: ಹಿಜಾಬ್ ಪರ ವಕೀಲರು
ದೇಶಾದ್ಯಂತ ತೀವ್ರ ಚರ್ಚೆ ಹುಟ್ಟುಹಾಕಿದ್ದ ಹಿಜಾಬ್ ಪ್ರಕರಣ ಕುರಿತ ಹೈಕೋರ್ಟ್ ಆದೇಶ ಹೊರಬಿದ್ದಿದ್ದು, ಶಾಲಾ ಕಾಲೇಜಿನ ತರಗತಿಗಳಿಗೆ ಹಿಜಾಬ್ ಧರಿಸಿ ಹಾಜರಾಗುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ 2022 ಫೆ.5ರಂದು ಹೊರಡಿಸಿದ್ದ ಆದೇಶವನ್ನು ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ.
ಬೆಂಗಳೂರು (ಮಾ. 16): ದೇಶಾದ್ಯಂತ ತೀವ್ರ ಚರ್ಚೆ ಹುಟ್ಟುಹಾಕಿದ್ದ ಹಿಜಾಬ್ ಪ್ರಕರಣ ಕುರಿತ ಹೈಕೋರ್ಟ್ ಆದೇಶ ಹೊರಬಿದ್ದಿದ್ದು, ಶಾಲಾ ಕಾಲೇಜಿನ ತರಗತಿಗಳಿಗೆ ಹಿಜಾಬ್ ಧರಿಸಿ ಹಾಜರಾಗುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ 2022 ಫೆ.5ರಂದು ಹೊರಡಿಸಿದ್ದ ಆದೇಶವನ್ನು ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ.
Hijab Verdict:ಶಿವಮೊಗ್ಗ, ಉಡುಪಿ ಕಾಲೇಜು ಆವರಣದಲ್ಲಿ 144 ಸೆಕ್ಷನ್ ಜಾರಿ
ಜತೆಗೆ, ಹಿಜಾಬ್ ಧಾರಣೆ ಇಸ್ಲಾಂ ಧಾರ್ಮಿಕ ಆಚರಣೆಯ ಅತ್ಯವಶ್ಯಕ ಭಾಗವಲ್ಲ ಎಂಬ ಮಹತ್ವದ ವ್ಯಾಖ್ಯಾನ ಮಾಡಿದೆ. ಈ ತೀರ್ಪನ್ನು ಪ್ರಶ್ನಿಸಿ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಹಿಜಾಬ್ ಅಭಿವ್ಯಕ್ತಿ ಸ್ವಾತಂತ್ರದ ಅಡಿಯಲ್ಲಿ ಬರುತ್ತದೆ. ಹಿಜಾಬ್ ಪರ ಹೋರಾಟಗಾರ್ತಿಯರಿಗೆ ನ್ಯಾಯ ಸಿಗಬೇಕು. ಅದೇ ಕಾರಣಕ್ಕೆ ನಾವು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದೇವೆ. ವಿಚಾರಣೆಯೂ ನಡೆಯಲಿ, ವಿಧ್ಯಾಭ್ಯಾಸವೂ ನಡೆಯಲಿ ಎಂದು ಹಿಜಾಬ್ ಪರ ವಕೀಲ ಹುಸೇನ್ ಕೋಡಿಬೆಂಗ್ರೆ ಹೇಳಿದ್ದಾರೆ.