ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಸಮರ್ಥಿಸಿಕೊಂಡ BC Nagesh

ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವನ್ನು ಸಮರ್ಥಿಸಿಕೊಂಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್   ರಾಜ್ಯದಲ್ಲಿ ಅನೇಕ ಬಾರಿ ಪಠ್ಯಪುಸ್ತಕ ಪರಿಷ್ಕರಣೆ ಆಗಿದ್ದು, ಬರಗೂರು ರಾಮಚಂದ್ರಪ್ಪ ಸಮಿತಿಗೂ ಆಕ್ಷೇಪ  ವ್ಯಕ್ತವಾಗಿತ್ತು ಎಂದಿದ್ದಾರೆ

First Published Jun 4, 2022, 4:05 PM IST | Last Updated Jun 4, 2022, 4:05 PM IST

ಬೆಂಗಳೂರು (ಜೂ. 4): ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ (textbook revision) ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraj bommai) ಅವರು ಈ ಸಂಬಂಧ ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ವಿವಾದತ್ತೆ ತೆರೆ ಎಳೆಯಲು ಯತ್ನಿಸಿದ್ದಾರೆ.  ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಕಾರ್ಯ ಪೂರ್ಣಗೊಂಡಿರುವುದರಿಂದ ಸಮಿತಿ ವಿಸರ್ಜನೆ ಮಾಡಲಾಗಿದೆ. ಯಾವುದೇ ಒತ್ತಡದಿಂದ ಈ ನಿರ್ಧಾರ ಕೈಗೊಂಡಿಲ್ಲ. ಹೊಸ ಸಮಿತಿ ರಚಿಸುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಮ್ಮದು ಬಸವ ಪಥ ಸರ್ಕಾರ: ಪಠ್ಯದಲ್ಲಿ ಬಸವಣ್ಣ ನಿಜ ಇತಿಹಾಸದ ಪರಿಚಯ: ಸಿಎಂ 

ಇನ್ನು ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವನ್ನು ಸಮರ್ಥಿಸಿಕೊಂಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್  ( BC Nagesh) ರಾಜ್ಯದಲ್ಲಿ ಅನೇಕ ಬಾರಿ ಪಠ್ಯಪುಸ್ತಕ ಪರಿಷ್ಕರಣೆ ಆಗಿದ್ದು, ಬರಗೂರು ರಾಮಚಂದ್ರಪ್ಪ ಸಮಿತಿಗೂ ಆಕ್ಷೇಪ  ವ್ಯಕ್ತವಾಗಿತ್ತು. ಅವರ ಸಮಿತಿಯಲ್ಲಿ ಬಸವಣ್ಣನ ಪಾಠವನ್ನು ಪರಿಷ್ಕರಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹೊಸ ಸಮಿತಿ ರಚನೆ ಆಗಿದೆ.  ಹಿಂದಿನ ಪರಿಷ್ಕರಣೆಯನ್ನು ಮುಂದುವರೆಸಿದ್ದೇವೆ ಅಷ್ಟೇ ಎಂದು ಹೇಳಿದ್ದಾರೆ.