
ಹಿಜಾಬ್ ವಿವಾದ, ವಿದ್ಯಾರ್ಥಿಗಳಿಗೆ ಸದ್ಯಕ್ಕಿಲ್ಲ ರಿಲೀಫ್, ಕೋರ್ಟ್ ಹೇಳಿದ್ದಿಷ್ಟು
ತೀವ್ರ ಕುತೂಹಲ ಮೂಡಿಸಿದ್ದ ಹಿಜಾಬ್-ಕೇಸರಿ ವಿವಾದದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಹೋಗಿದೆ.
ಬೆಂಗಳೂರು, (ಫೆ.09): ತೀವ್ರ ಕುತೂಹಲ ಮೂಡಿಸಿದ್ದ ಹಿಜಾಬ್-ಕೇಸರಿ ವಿವಾದದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಹೋಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Hijab Row ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಸರಬರಾಜು ಮಾಡಿದ್ಯಾರು? ಸ್ಫೋಟಕ ಹೇಳಿಕೆ ಕೊಟ್ಟ ಡಿಕೆಶಿ
ಹಿಜಾಬ್ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಲಾಗಿದೆ. ವಿಸ್ತೃತ ಪೀಠ ರಚಿಸುವ ಬಗ್ಗೆ ಹೈಕೋರ್ಟ್ ಸಿಜೆ ತೀರ್ಮಾನಿಸಲಿ. ಈ ಪ್ರಕರಣ ವಿಸ್ತೃತ ಪೀಠದಲ್ಲಿ ವಿಚಾರಣೆಗೆ ಯೋಗ್ಯವಾಗಿದೆ. ಈ ಬಗ್ಗೆ ಹೈಕೋರ್ಟ್ ಸಿಜೆ ವಿವೇಚನಾಧಿಕಾರ ಹೊಂದಿದ್ದಾರೆ. ತಕ್ಷಣವೇ ಸಂಪೂರ್ಣ ಕಡತ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿ ಎಂದು ಹೈಕೋರ್ಟ್ ರಿಜಿಸ್ಟ್ರಾರ್ಗೆ ನ್ಯಾಯಮೂರ್ತಿಗಳ ನಿರ್ದೇಶನ ನೀಡಿದ್ದಾರೆ. ಅರ್ಜಿದಾರರು ಮುಂದಿನ ವಿಚಾರಣೆ ವೇಳೆ ಮನವಿ ಸಲ್ಲಿಸಬಹುದು. ಮಧ್ಯಂತರ ಆದೇಶದ ಬಗ್ಗೆ ಮನವಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.