Hijab Row: ಶಿಕ್ಷಣಕ್ಕಿಂತ ಧರ್ಮವೇ ಮುಖ್ಯ, ಹಿಜಾಬ್ ತೆಗೆಯಲ್ಲ, ಮುಂದುವರೆದ ಗದ್ದಲ
ಸಮವಸ್ತ್ರ ನಿಯಮ ಇರುವ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಉಡುಗೆ-ತೊಡುಗೆ ಧರಿಸುವಂತಿಲ್ಲ ಎಂಬ ಹೈಕೋರ್ಟ್ ಆದೇಶದ ಹೊರತಾಗಿಯೂ ಶಾಲೆ ಪುನಾರಂಭವಾದ 2ನೇ ದಿನ ರಾಜ್ಯದ ವಿವಿಧೆಡೆ ಅನೇಕ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದಿದ್ದರಿಂದ ಗದ್ದಲ ಮುಂದುವರೆದಿದೆ.
ಬೆಂಗಳೂರು (ಫೆ. 16): ಸಮವಸ್ತ್ರ ನಿಯಮ ಇರುವ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಉಡುಗೆ-ತೊಡುಗೆ ಧರಿಸುವಂತಿಲ್ಲ ಎಂಬ ಹೈಕೋರ್ಟ್ ಆದೇಶದ ಹೊರತಾಗಿಯೂ ಶಾಲೆ ಪುನಾರಂಭವಾದ 2ನೇ ದಿನ ರಾಜ್ಯದ ವಿವಿಧೆಡೆ ಅನೇಕ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದಿದ್ದರಿಂದ ಗದ್ದಲ ಮುಂದುವರೆದಿದೆ.
ರಾಷ್ಟ್ರಧ್ವಜಕ್ಕೆ ಅವಮಾನ, ಈಶ್ವರಪ್ಪ ಮೇಲೆ ಯಾಕಿಲ್ಲ ಕ್ರಮ: ಸದನದಲ್ಲಿ ಸಿದ್ದರಾಮಯ್ಯ ಪ್ರಶ್ನೆ
ಹಿಜಾಬ್‌ಪರ ವಿದ್ಯಾರ್ಥಿಗಳನ್ನು ಪೋಷಕರೂ ಬೆಂಬಲಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 15ಕ್ಕೂ ಹೆಚ್ಚು ಶಾಲೆ ಕಾಲೇಜುಗಳ 650ಕ್ಕೂ ಹೆಚ್ಚು ಮಕ್ಕಳು ತರಗತಿಗಳಿಗೆ ಗೈರು ಹಾಜರಾಗಿದ್ದಾರೆ. ಕಲಬುರಗಿ, ಶಿವಮೊಗ್ಗ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಮಕ್ಕಳು ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಸಹ ಬಹಿಷ್ಕರಿಸಿದ್ದಾರೆ. ಕೋರ್ಟ್ ಆದೇಶವಿದ್ದರೂ ನಾವು ಹಿಜಾಬ್ ಧರಿಸಿಯೇ ಸಿದ್ಧ ಎಂದು ಪಟ್ಟು ಹಿಡಿದಿದ್ದಾರೆ.
ಯಾದಗಿರಿ, ಮಂಡ್ಯ, ಕಲಬುರಗಿ, ಉಡುಪಿ ಜಿಲ್ಲೆಯ ಕಾಪು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಕೊಪ್ಪಳ ಸೇರಿ ಹಲವೆಡೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳ ನಡುವೆ ವಾಗ್ವಾದ, ಹೈಡ್ರಾಮಗಳು ಏರ್ಪಟ್ಟಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ರಾಯಚೂರು, ತುಮಕೂರು ಜಿಲ್ಲೆಗಳ 10ಕ್ಕೂ ಹೆಚ್ಚು ಕಡೆಗಳಲ್ಲಿ ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆಗಳನ್ನು ಸಹ ನಡೆಸಿದ್ದಾರೆ. ಅನೇಕ ಕಡೆಗಳಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸಿದ್ದರಿಂದ ಪರಿಸ್ಥಿತಿ ಹತೋಟಿಗೆ ಬಂದಿದೆ.