ರಾಜ್ಯದಲ್ಲೂ ಪಿಯು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದಾಗುತ್ತಾ.?

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರದಲ್ಲೂ ರಾಜ್ಯ ಸರ್ಕಾರ ಇದೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ. 

First Published Jun 2, 2021, 9:13 AM IST | Last Updated Jun 2, 2021, 9:18 AM IST

ಬೆಂಗಳೂರು (ಜೂ. 02):  ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರದಲ್ಲೂ ರಾಜ್ಯ ಸರ್ಕಾರ ಇದೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ.

CBSE 12 ನೇ ಕ್ಲಾಸ್ ಪರೀಕ್ಷೆ ರದ್ದು ಬೆನ್ನಲ್ಲೇ ಪಿಯುಸಿ ಎಕ್ಸಾಂ ಬಗ್ಗೆ ಪ್ರತಿಕ್ರಿಯಿಸಿದ ಸಚಿವ

ಕೇಂದ್ರ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ರಾಜ್ಯ ಸರ್ಕಾರ ಕಾಯುತ್ತಿತ್ತು. ಹೀಗಾಗಿ ‘ಶೀಘ್ರ ನಿರ್ಧಾರ ಪ್ರಕಟಿಸುತ್ತೇವೆ’ ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ತಿಳಿಸಿದ್ದಾರೆ. ಆದರೆ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತುಸು ಕಾಲಾವಕಾಶ ಇರುವುದರಿಂದ ಪರಿಸ್ಥಿತಿ ನೋಡಿಕೊಂಡು ನಿರ್ಧರಿಸುವ ಸಂಭವವಿದೆ. 

Video Top Stories