Asianet Suvarna News Asianet Suvarna News

ಹಿಜಾಬ್‌ಗೆ ಸಿಗದ ಅನುಮತಿ ಕರಾವಳಿಯಲ್ಲಿ ಟೀಸಿ ಪಡೆದ ನೂರಾರು ಮುಸ್ಲಿಂ ವಿದ್ಯಾರ್ಥಿನಿಯರು!

ಹಿಜಾಬ್ ವಿವಾದ ಬಳಿಕ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶವಿಲ್ಲದ ಕಾಲೇಜುಗಳನ್ನು ಬಿಟ್ಟು ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ.

First Published Aug 22, 2022, 7:22 PM IST | Last Updated Aug 22, 2022, 7:22 PM IST

ಹಿಜಾಬ್ ವಿವಾದ ಬಳಿಕ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶವಿಲ್ಲದ ಕಾಲೇಜುಗಳನ್ನು ಬಿಟ್ಟು ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ವಿವಿಧ ಸರ್ಕಾರಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯರಲ್ಲಿ ಶೇಕಡ 16ರಷ್ಟು ಮಂದಿ ಟಿಸಿ ಪಡೆದು ಬೇರೆ ಕಾಲೇಜಿಗೆ ಹೋಗುತ್ತಿದ್ದಾರೆ ಎಂದು ವರದಿ ತಿಳಿಸಿದೆ.  ರಾಜ್ಯಕ್ಕೆ ಇದು ಜಲ್ವಂತ ಸಮಸ್ಯೆಯಾಗಲಿದೆ ಎಂದು ಕಾಲೇಜಿನಿಂದ ಟಿಸಿ ಪಡೆದ ವಿದ್ಯಾರ್ಥಿನಿ ಹಿಜಾಬ್ ಹೋರಾಟಗಾರ್ತಿ ಗೌಸಿಯಾ ಹೇಳಿದ್ದಾರೆ. ಉಭಯ ಜಿಲ್ಲೆಗಳಲ್ಲಿ ಸುಮಾರು 900 ಮುಸ್ಲಿಂ ವಿದ್ಯಾರ್ಥಿನಿಯರು ಇದ್ದು, ಇದರಲ್ಲಿ 145 ಮಂದಿ ಟಿಸಿ ಪಡೆದು ಹೊರ ನಡೆದಿದ್ದಾರೆ. ವಿಶ್ವವಿದ್ಯಾನಿಲಯದ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ ಕೂಡ ಟಿಸಿ ಪಡೆಯಲು ಅವಕಾಶ ಇದೆ ಎಂದು  ಹೇಳಿದ್ದರು.

Video Top Stories