ಜ. 01 ರಿಂದ ಶಾಲಾ-ಕಾಲೇಜು ಪುನಾರಂಭದ ಬಗ್ಗೆ ಸುರೇಶ್ ಕುಮಾರ್ ಸ್ಪಷ್ಟನೆಯಿದು!

'ಹೊಸ ವೈರಸ್ ಬಗ್ಗೆ ಅಪಾಯ ಇಲ್ಲ ಎಂದು ತಜ್ಞರು ಹೇಳಿದ್ದಾರೆ. ಶಾಲೆ ಆರಂಭಿಸಬಹುದು ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಪೋಷಕರು ಹೆದರುವ ಅಗತ್ಯ ಇಲ್ಲ.  ಜನವರಿ 1 ರಿಂದ ನಿಗದಿಯಂತೆ ಶಾಲಾ ಕಾಲೇಜು ಆರಂಭವಾಗುವುದು' ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ. 30): 'ಹೊಸ ವೈರಸ್ ಬಗ್ಗೆ ಅಪಾಯ ಇಲ್ಲ ಎಂದು ತಜ್ಞರು ಹೇಳಿದ್ದಾರೆ. ಶಾಲೆ ಆರಂಭಿಸಬಹುದು ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಪೋಷಕರು ಹೆದರುವ ಅಗತ್ಯ ಇಲ್ಲ. ಜನವರಿ 1 ರಿಂದ ನಿಗದಿಯಂತೆ ಶಾಲಾ ಕಾಲೇಜು ಆರಂಭವಾಗುವುದು' ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. 

'ಶಾಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದ್ದೇವೆ. ಪ್ರತಿ ಶಾಲೆಗೂ ಮಾರ್ಗಸೂಚಿಗಳನ್ನು ಕಳುಹಿಸಲಾಗಿದೆ. ಮಕ್ಕಳ ಸುರಕ್ಷತೆಯ ಬಗ್ಗೆ ನಮಗೂ ಕಾಳಜಿಯಿದೆ' ಎಂದಿದ್ಧಾರೆ.

ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಸಹಕರಿಸಿ: ಸಿಎಂ ಮನವಿ

Related Video