Asianet Suvarna News Asianet Suvarna News

1-5 ನೇ ಕ್ಲಾಸ್ ಆರಂಭ; ಶಾಲೆಗಳಿಗೆ ಸುರೇಶ್ ಕುಮಾರ್ ಮಹತ್ವದ ಸೂಚನೆ

ಸರ್ಕಾರದ ಆದೇಶ ಮೀರಿ ಒಂದರಿಂದ ಐದನೇ ತರಗತಿವರೆಗಿನ ಮಕ್ಕಳಿಗೂ ತರಗತಿ ಬೋಧನೆ ನಡೆಸುತ್ತಿರುವ ಶಾಲೆಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸುವಂತೆ  ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌  ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಬೆಂಗಳೂರು (ಮಾ. 12): ಸರ್ಕಾರದ ಆದೇಶ ಮೀರಿ ಒಂದರಿಂದ ಐದನೇ ತರಗತಿವರೆಗಿನ ಮಕ್ಕಳಿಗೂ ತರಗತಿ ಬೋಧನೆ ನಡೆಸುತ್ತಿರುವ ಶಾಲೆಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ರಾಜ್ಯದ ಎಲ್ಲ ಜಿಲ್ಲಾ ಉಪನಿರ್ದೇಶಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ದೈನಂದಿನ ಕೇಸು ಹತ್ತೇ ದಿನದಲ್ಲಿ ಡಬಲ್, ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಆತಂಕ

ಕೋವಿಡ್‌ ಹಿನ್ನೆಲೆಯಲ್ಲಿ ಸರ್ಕಾರ ಪ್ರಸ್ತುತ 6ರಿಂದ 10ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಮಾತ್ರ ತರಗತಿ ಬೋಧನೆಗೆ ಅವಕಾಶ ನೀಡಿದೆ. ಆದರೆ, ಕೆಲ ಖಾಸಗಿ ಶಾಲೆಗಳು ಅನುಮತಿ ಇಲ್ಲದ 1ರಿಂದ 5ನೇ ತರಗತಿ ಮಕ್ಕಳಿಗೂ ಶಾಲೆಗೆ ಹಾಜರಾಗುವಂತೆ ಸೂಚಿಸಿ ತರಗತಿ ನಡೆಸುತ್ತಿವೆ.  ಅಂತಹ ಶಾಲೆಗಳ ವಿರುದ್ಧ ಕಾನೂನಾತ್ಮಕವಾಗಿ ಕಠಿಣ ಕ್ರಮ ಕೈಗೊಳ್ಳಿ ಎಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.