ಇಲ್ಲಿಯವರೆಗೆ ಶಾಲೆ ತೆರೆಯುವುದಿಲ್ಲ: ಸಿಎಂ ಸಭೆಯಲ್ಲಿ ಹೊರಬಿತ್ತು ಸ್ಪಷ್ಟ ನಿರ್ಧಾರ
ಶಾಲೆ ಪುನಾರಂಭದ ಬಗ್ಗೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳಿವು.
ಬೆಂಗಳೂರು (ನ. 23): ಶಾಲೆ ಪುನಾರಂಭ ವಿಚಾರದ ಗೊಂದಲಕ್ಕೆ ತಾತ್ಕಾಲಿಕವಾಗಿ ತೆರೆ ಬಿದ್ದಿದೆ. ಶಾಲಾ- ಕಾಲೇಜುಗಳನ್ನು ಪುನಾರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನುವ ಬಗ್ಗೆ ಚರ್ಚೆ ಶುರುವಾದಾಗ ಪೋಷಕರ ವಲಯದಿಂದ, ಸಾರ್ವಜನಿಕರ ವಲಯದಿಂದ ಆಕ್ಷೇಪ ವ್ಯಕ್ತವಾಗಿತ್ತು. ಸರ್ಕಾರ ತರಾತುರಿ ಮಾಡುವ ಅಗತ್ಯ ಇಲ್ಲ. ಇನ್ನೊಮ್ಮೆ ಯೋಚಿಸಲಿ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು.
ಆರು ವರ್ಷಗಳ ಹಿಂದೆ ಕಳೆದು ಹೋಗಿದ್ದ ನಾಯಿ ಪೋಷಕರ ಮಡಿಲಿಗೆ, ಕ್ಯಾನ್ಸರ್‌ಗೆ ಹೊಸ ಚಿಕಿತ್ಸೆ
ಶಾಲೆ ಪುನಾರಂಭದ ಬಗ್ಗೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಡಿಸಂಬರ್ ಕೊನೆಯವರೆಗೆ ಶಾಲೆ ತೆರೆಯುವುದಿಲ್ಲ ಎಂಬ ಸ್ಪಷ್ಟ ನಿರ್ಧಾರಕ್ಕೆ ಬರಲಾಗಿದೆ. ಪಿಯು ಕಾಲೇಜುಗಳು ತೆಗೆಯುವುದಿಲ್ಲ. ಒಟ್ಟಿನಲ್ಲಿ ಮಕ್ಕಳಿಗೆ ಹಾಗೂ ಪೋಷಕರಿಗೆ ರಿಲೀಫ್ ಸಿಕ್ಕಂತಾಗಿದೆ.