ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 60 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಹಾಗೂ 10 ಸಾವಿರ ಶಿಕ್ಷಕರು ನಿವೃತ್ತಿಯ ಹಂತದಲ್ಲಿದ್ದಾರೆ. ಶಿಕ್ಷಕರ ಕೊರತೆ, ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ಶಾಲೆಗಳ ಸಂಖ್ಯೆ ಕುಸಿಯುತ್ತಿದೆ ಮತ್ತು ಮಕ್ಕಳ ದಾಖಲಾತಿ ಮತ್ತು ಹಾಜರಾತಿಯ ಮೇಲೆ ಪರಿಣಾಮ ಬೀರುತ್ತಿದೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 60 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದೆ. ಈ ನಡುವೆ ಸುಮಾರು 10 ಸಾವಿರಕ್ಕೂ ಅಧಿಕ ಶಿಕ್ಷಕರು ನಿವೃತ್ತಿಯ ಹಂತದಲ್ಲಿದ್ದಾರೆ. ಸಾವಿರಾರು ಮಂದಿ ನಿವೃತ್ತಿ ಹೊಂದಿದ್ರೆ ಮತ್ತಷ್ಟು ಶಿಕ್ಷಕರ ಕೊರತೆ ಆಗಲಿದೆ. ಸರ್ಕಾರ ಬಂದು ಒಂದೂವರೆ ವರ್ಷವಾದ್ರೂ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ.
ಇದರ ನಡುವೆ ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹಾಗೂ ಹಾಜರಾತಿ ಕಡಿಯಾಗುತ್ತಿದೆ. ಒಂದಲ್ಲ ಒಂದು ಕಾರಣಕ್ಕೆ ಕನ್ನಡ ಮಾದ್ಯಮ ಶಾಲೆಗಳು ಬಂದ್ ಆಗುತ್ತಿವೆ. ಇದು ಸರ್ಕರಿ ಶಾಲೆಗಳ ಪ್ರಗತಿ ಫಲಿತಾಂಶದ ಕುಸಿತಕ್ಕೆ ಕಾರಣವಾಗಿದೆ. ಇನ್ನು 2022-23ರ ಸಾಲಿನಲ್ಲಿ ರಾಜ್ಯದಲ್ಲಿ 48,066 ಸರ್ಕಾರಿ ಶಾಲೆಗಳಿದ್ದರೆ ಈ ವರ್ಷ ಶಾಲೆಗಳ ಸಂಖ್ಯೆ 47,449ಕ್ಕೆ ಕುಸಿದಿದೆ. ಶಾಲೆಗಳ ಕುಸಿತಕ್ಕೆ ಕಾರಣ ಅಂದ್ರೆ ಮೂಲಭೂತ ಸೌಲಭ್ಯ ಕೊರತೆ ಹಾಗೂ ಶಿಕ್ಷಕರ ಕೊರತೆ ಇದೆ. ರಾಜ್ಯದಲ್ಲಿ ಬರೊಬ್ಬರಿ 50 ಸಾವಿರಕ್ಕು ಹೆಚ್ಚು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಕರ ಕೊರತೆ ಇದೆ. ಮಾಡಲ್ ಶಾಲೆ ಸೇರಿದಂತೆ ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಜೊತೆಗೆ ಮೂಲ ಸೌಕರ್ಯಗಳ ಕೊರತೆ ಕೂಡ ಇದೆ.