ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆ ಓಪನ್ : 6 ರಿಂದ 8ನೇ ತರಗತಿಗಳು ಶುರು..?

ರಾಜ್ಯ ಸರ್ಕಾರ ಸೆಪ್ಟೆಂಬರ್‌ ಆರಂಭದಿಂದ 6ರಿಂದ 8ನೇ ತರಗತಿ ಮಕ್ಕಳಿಗೂ ಶಾಲೆಗಳನ್ನು ಆರಂಭಿಸಲು ಮುಂದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ  ಇಂದು ನಡೆಯುವ ಆರೋಗ್ಯ ಇಲಾಖೆ, ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಈ ಸಂಬಂಧ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.

ಸದ್ಯ 6ರಿಂದ 8ನೇ ತರಗತಿ ಆರಂಭಿಸಲು ಅನುಮತಿ ನೀಡಿದರೂ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಶಾಲೆ ಆರಂಭಿಸುವ ಸಾಧ್ಯತೆ ಇಲ್ಲ. ಹಾಗಾಗಿ ತಜ್ಞರು, ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಹಾಗೂ ಆರೋಗ್ಯ ಇಲಾಖೆ ಸಲಹೆ ಪಡೆದು ಈ ಐದು ತರಗತಿಗಳನ್ನು ಎಂದಿನಿಂದ ಆರಂಭಿಸಬೇಕು ಎಂಬ ಬಗ್ಗೆ ನಿರ್ಧರಿಸಲು ಸರ್ಕಾರ ಚಿಂತನೆ ನಡೆಸಿದೆ. ಅಲ್ಲದೇ 6 ರಿಂದ 8ನೇ ತರಗತಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಆರಂಭವಾಗುವ ಸಾಧ್ಯತೆ ಇದೆ.

First Published Aug 30, 2021, 10:07 AM IST | Last Updated Aug 30, 2021, 10:07 AM IST

ಬೆಂಗಳೂರು (ಆ.30):  ರಾಜ್ಯ ಸರ್ಕಾರ ಸೆಪ್ಟೆಂಬರ್‌ ಆರಂಭದಿಂದ 6ರಿಂದ 8ನೇ ತರಗತಿ ಮಕ್ಕಳಿಗೂ ಶಾಲೆಗಳನ್ನು ಆರಂಭಿಸಲು ಮುಂದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ  ಇಂದು ನಡೆಯುವ ಆರೋಗ್ಯ ಇಲಾಖೆ, ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಈ ಸಂಬಂಧ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.

6-8ನೇ ಕ್ಲಾಸ್‌ ಆರಂಭಕ್ಕೆ ಇಂದು ಸರ್ಕಾರದ ಅಸ್ತು?

Read More...