1ರಿಂದ 5ನೇ ತರಗತಿ ಪ್ರಾರಂಭ ಮುಹೂರ್ತ ಫಿಕ್ಸ್: ಇಲ್ಲಿದೆ ಹೊಸ ಮಾರ್ಗಸೂಚಿ
1-ರಿಂದ 5ನೇ ತರಗತಿವರೆಗಿನ ಶಾಲೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಮಾರ್ಗಸೂಚಿ ಕೂಡ ಪ್ರಕಟವಾಗಿದೆ.
ಬೆಂಗಳೂರು, (ಅ.18): 1-ರಿಂದ 5ನೇ ತರಗತಿವರೆಗಿನ ಶಾಲೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಮಾರ್ಗಸೂಚಿ ಕೂಡ ಪ್ರಕಟವಾಗಿದೆ.
1 ರಿಂದ 5ನೇ ತರಗತಿ ಪ್ರಾರಂಭಕ್ಕೆ ಕೂಡಿಬಂತು ಕಾಲ
ಅಕ್ಟೋಬರ್ 25ರಿಂದ 1-5ನೇ ತರಗತಿವರೆಗೆ ಶಾಲೆಗಳನ್ನು ಆರಂಭಿಸಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿ ಅನ್ವಯ ಅ.25ರಿಂದ ಪ್ರಾಥಮಿಕ ಶಾಲೆಗಳನ್ನು ತೆರೆಯಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.