ಮಕ್ಕಳೆ ಶಾಲೆಗೆ ಹೊರಡಿ : ಆರಂಭವಾಗುತ್ತಿವೆ ತರಗತಿಗಳು

ಸರ್ಕಾರದ ಆದೇಶದಂತೆ ಸೋಮವಾರದಿಂದ (ಸೆ.6) 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೂ ಶಾಲೆಗಳಲ್ಲಿ ಭೌತಿಕ ತರಗತಿಗಳು ಆರಂಭವಾಗಲಿದ್ದು, ಈ ಮೂರೂ ತರಗತಿ ಮಕ್ಕಳನ್ನು ಸ್ವಾಗತಿಸಲು ಶಾಲೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿವೆ.

ಮೊದಲ ಹಂತದಲ್ಲಿ ಆ.23ರಿಂದ 9ರಿಂದ 12ನೇ ತರಗತಿ ಮಕ್ಕಳಿಗೆ ಶಾಲೆಗಳನ್ನು ಆರಂಭಿಸಿದ ಸರ್ಕಾರ ಎರಡನೇ ಹಂತದಲ್ಲಿ 6ರಿಂದ 8ನೇ ತರಗತಿಗಳನ್ನು ಆರಂಭಿಸಲು ಅನುಮತಿ ನೀಡಿದೆ. ಅದರಂತೆ ಕೋವಿಡ್‌ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ (ಕೇರಳ ಗಡಿ ಭಾಗದ ತಾಲ್ಲೂಕುಗಳನ್ನು ಹೊರತುಪಡಿಸಿ) ಎಲ್ಲಾ ಜಿಲ್ಲೆಗಳು ಮತ್ತು ತಾಲ್ಲೂಕುಗಳಲ್ಲಿ 6ರಿಂದ 8ನೇ ತರಗತಿ ಆರಂಭವಾಗಲಿವೆ. ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಈ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಲಿದ್ದು, ಮಕ್ಕಳನ್ನು ಬರಮಾಡಿಕೊಳ್ಳಲು ಆಯಾ ಶಾಲಾ ಶಿಕ್ಷಕರು, ಆಡಳಿತ ಮಂಡಳಿಗಳು ಸಕಲ ಸಿದ್ಧತೆ ನಡೆಸಿವೆ.

First Published Sep 5, 2021, 1:09 PM IST | Last Updated Sep 5, 2021, 1:09 PM IST

ಬೆಂಗಳೂರು (ಸೆ.05):  ಸರ್ಕಾರದ ಆದೇಶದಂತೆ ಸೋಮವಾರದಿಂದ (ಸೆ.6) 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೂ ಶಾಲೆಗಳಲ್ಲಿ ಭೌತಿಕ ತರಗತಿಗಳು ಆರಂಭವಾಗಲಿದ್ದು, ಈ ಮೂರೂ ತರಗತಿ ಮಕ್ಕಳನ್ನು ಸ್ವಾಗತಿಸಲು ಶಾಲೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿವೆ.

6, 7, 8ನೇ ಕ್ಲಾಸ್‌ ಆರಂಭಕ್ಕೆ ಕ್ಷಣಗಣನೆ : ಬ್ಯಾಚ್‌ಗಳಲ್ಲಿ ಕ್ಲಾಸ್‌

ಮೊದಲ ಹಂತದಲ್ಲಿ ಆ.23ರಿಂದ 9ರಿಂದ 12ನೇ ತರಗತಿ ಮಕ್ಕಳಿಗೆ ಶಾಲೆಗಳನ್ನು ಆರಂಭಿಸಿದ ಸರ್ಕಾರ ಎರಡನೇ ಹಂತದಲ್ಲಿ 6ರಿಂದ 8ನೇ ತರಗತಿಗಳನ್ನು ಆರಂಭಿಸಲು ಅನುಮತಿ ನೀಡಿದೆ. ಅದರಂತೆ ಕೋವಿಡ್‌ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ (ಕೇರಳ ಗಡಿ ಭಾಗದ ತಾಲ್ಲೂಕುಗಳನ್ನು ಹೊರತುಪಡಿಸಿ) ಎಲ್ಲಾ ಜಿಲ್ಲೆಗಳು ಮತ್ತು ತಾಲ್ಲೂಕುಗಳಲ್ಲಿ 6ರಿಂದ 8ನೇ ತರಗತಿ ಆರಂಭವಾಗಲಿವೆ. ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಈ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಲಿದ್ದು, ಮಕ್ಕಳನ್ನು ಬರಮಾಡಿಕೊಳ್ಳಲು ಆಯಾ ಶಾಲಾ ಶಿಕ್ಷಕರು, ಆಡಳಿತ ಮಂಡಳಿಗಳು ಸಕಲ ಸಿದ್ಧತೆ ನಡೆಸಿವೆ.

Video Top Stories