Asianet Suvarna News Asianet Suvarna News

Hijab Verdict: ಹಿಜಾಬ್ ತೀರ್ಪು ಬೆನ್ನಲ್ಲೇ ಪರೀಕ್ಷೆ ಬರೆಯದೆ ಹೊರಟ ವಿದ್ಯಾರ್ಥಿನಿಯರು

  ಯಾದಗಿರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಿಜಾಬ್‌ಗೆ ಅನುಮತಿ ಕೋರಿದ್ದ ಅರ್ಜಿ ವಜಾ ಹಿನ್ನೆಲೆ ಪರೀಕ್ಷೆ ಬಹಿಷ್ಕರಿಸಿ ಮನೆಗೆ ತೆರಳಿರುವ ಘಟನೆ ನಡೆದಿದೆ. 

First Published Mar 15, 2022, 5:07 PM IST | Last Updated Mar 15, 2022, 5:07 PM IST

ಯಾದಗಿರಿ(ಮಾ.15): ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಬಾವಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಿಜಾಬ್‌ಗೆ ಅನುಮತಿ ಕೋರಿದ್ದ ಅರ್ಜಿ ವಜಾ ಹಿನ್ನೆಲೆ ಪರೀಕ್ಷೆ ಬಹಿಷ್ಕರಿಸಿ ಮನೆಗೆ ತೆರಳಿರುವ ಘಟನೆ ನಡೆದಿದೆ. ಹಿಜಾಬ್‌ ಬಿಟ್ಟು ತರರಗತಿ ಬರಲ್ಲ ಎಂದು ದ್ವಿತೀಯ ಪಿಯುಸಿ ಪೂರ್ವಭಾವಿ ಪರೀಕ್ಷೆಗೆ ಚಕ್ಕರ್ ಹೊಡೆದಿದ್ದಾರೆ.

Mysuru: ಶುಲ್ಕ ನೀಡದ ಮಕ್ಕಳನ್ನು ಹೊರಗೆ ಕೂರಿಸಿದ ಶಾಲೆ..!

ಹಿಜಾಬ್ ತೀರ್ಪು ಬಂದ ನಂತರ ವಿದ್ಯಾರ್ಥಿನಿಯರು ಒಟ್ಟು 8 ವಿದ್ಯಾರ್ಥಿನಿಯರು ಮನೆಗೆ ತೆರಳಿದ್ದಾರೆ.  ಇನ್ನು ಇಂದು ತೀರ್ಪು ನೀಡಿರುವ ಕರ್ನಾಟಕ ಉಚ್ಚ ನ್ಯಾಯಾಲಯ ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ ಎಂದಿದೆ. ಅಲ್ಲದೇ ಶಾಲೆಗೆ ಕೇಸರಿ ಶಾಲು, ಹಿಜಾಬ್ ಆಗಲಿ ಯಾವುದೂ ಧರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಸರ್ಕಾರ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶವನ್ನು ಕೋರ್ಟ್‌ ಎತ್ತಿ ಹಿಡಿದಿದೆ.