ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ಸಿಹಿಸುದ್ದಿ.
ಉಕ್ರೇನ್ ನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು, ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲೇ ಅವರ ಕಲಿಕೆ ಮುಂದುವರಿಸುವ ಮಹತ್ವದ ತೀರ್ಮಾನ.
ಬೆಂಗಳೂರು(ಮಾ.22): ಉಕ್ರೇನ್ (Ukraine) ನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳ (Medical Students) ಭವಿಷ್ಯ ರೂಪಿಸಲು, ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲೇ ಅವರ ಕಲಿಕೆ ಮುಂದುವರಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (dr k sudhakar) ಅವರು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಜೊತೆಗೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿದೆ.
ಪಠ್ಯದಲ್ಲಿ Bhagavad Gita ಅಳವಡಿಸಲು ಸಮಿತಿ ರಚನೆ
ಸಭೆ ಬಳಿಕ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಅವರು, ಉಕ್ರೇನ್ ಹಾಗೂ ರಷ್ಯಾ ನಡುವೆ ನಿರಂತರವಾಗಿ ಯುದ್ಧ ನಡೆಯುತ್ತಿದೆ. ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 700ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ. ಅವರ ಶೈಕ್ಷಣಿಕ ಭವಿಷ್ಯ ರೂಪಿಸುವ ಬಗ್ಗೆ ಅವರೊಂದಿಗೆ ಚರ್ಚಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದರು. ಅದರಂತೆ ಚರ್ಚೆ ನಡೆಸಿದ್ದು, ತಾತ್ಕಾಲಿಕವಾಗಿ ಒಂದು ಅಭಿಪ್ರಾಯಕ್ಕೆ ಬರಲಾಗಿದೆ ಎಂದಿದ್ದಾರೆ.