karnataka schools colleges closed: ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ ಬಗ್ಗೆ ಸಂಜೆ ಸಭೆ ಬಳಿಕ ತೀರ್ಮಾನ

ಸಂಜೆ ಶಿಕ್ಷಣ ಸಚಿವರು ಮತ್ತು ಗೃಹ ಸಚಿವರ ಜೊತೆ ಸಭೆ ನಡೆಸಿ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ ವಿಸ್ತರಣೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

First Published Feb 10, 2022, 12:58 PM IST | Last Updated Feb 10, 2022, 1:00 PM IST

ಬೆಂಗಳೂರು(ಫೆ.10): ಶಾಲಾ ಕಾಲೇಜುಗಳಿಗೆ ಮತ್ತೆ ರಜೆ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಸಂಜೆ ಶಿಕ್ಷಣ ಸಚಿವರು ಮತ್ತು ಗೃಹ ಸಚಿವರ ಜೊತೆ ಸಭೆ ನಡೆಸಿ, ಮುಂದಿನ ನಿರ್ಧಾರ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Basavaraj Bommai ) ತಿಳಿಸಿದ್ದಾರೆ.  ಶಾಲಾ ಕಾಲೇಜುಗಳಲ್ಲಿ ಮೊದಲಿನ‌ ರೀತಿ ಶಾಂತಿ ಸೌಹಾರ್ದತೆ ತರುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಹಿಜಾಬ್, ಕೇಸರಿ ಶಾಲು ವಿವಾದದ ವಿಚಾರಣೆಗೆ ಹೈಕೋರ್ಟ್‌ ತ್ರಿಸದಸ್ಯ ಪೀಠ ರಚಿಸಿದೆ. ಇಂದು ಅರ್ಜಿಗಳ ವಿಚಾರಣೆ ನಡೆಯಲಿದೆ. ಶಾಲೆಗಳಲ್ಲಿ ಸಮಸ್ಯೆ ಆಗದಂತೆ ರಜೆ ಘೋಷಣೆ ಮಾಡಿದ್ದೇವೆ. ಹೊರಗಿನ ಸಂಘಟನೆಗಳು ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಕೋರ್ಟ್ ಆದೇಶಕ್ಕೆ ಎಲ್ಲರೂ ಕಾಯಬೇಕು ಎಂದು ಬೊಮ್ಮಾಯಿ  ಮನವಿ ಮಾಡಿಕೊಂಡಿದ್ದಾರೆ.

Karnataka Hijab Row: ನನ್ನ ಗೆಳತಿಯರೇ ನಮಗೆ ವಿರುದ್ಧವಾಗಿ ನಿಂತಿದ್ದಾರೆ: ಅರ್ಜಿದಾರೆ ಶಿಫಾ! 

ರಾಜ್ಯದಲ್ಲಿ ಹಿಜಾಬ್ (Hijab) ವಿವಾದ ಭುಗಿಲೆದ್ದಿದೆ. ಒಂದು ಕಡೆ ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ವಿದ್ಯಾರ್ಥಿನಿಯರು ಹೋರಾಟ ಮಾಡುತ್ತಿದ್ದರೆ, ಇನ್ನೊಂದು ಕಡೆ ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಅಂತ ಹಿಂದೂ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ  ಸರಕಾರ ಮೂರು ದಿನಗಳ ಕಾಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಇದೀಗ ರಜೆ ಅವಧಿ ಮುಗಿದಿದೆ. ಇಂದು ಹೈಕೋರ್ಟ್‌ ನೀಡಲಿರುವ ತೀರ್ಪಿನ ಮೇಲೆ ಎಲ್ಲರ ಲಕ್ಷ್ಯ ನೆಟ್ಟಿದೆ.

Video Top Stories