ಫಲಿತಾಂಶಕ್ಕೆ ಕ್ಷಣಗಣನೆ: ಅನಿತಾ ಕುಮಾರಸ್ವಾಮಿ, ನಿಖಿಲ್ ಟೆಂಪಲ್ ರನ್
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನೊಂದೆಡೆ, ಸಿಎಂ ಎಚ್.ಡಿ. ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ತೆರಳಿ ಪೂಜೆ ಸಲ್ಲಿಸುತ್ತಿದ್ದಾರೆ. ಹೊಳೆನರಸೀಪುರ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯ, ಮಾವಿನಕೆರೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ, ಹರದನಹಳ್ಳಿ ಈಶ್ವರ ದೇವಾಲಯ, ಚನ್ನರಾಯಪಟ್ಟಣ ತಾಲ್ಲೂಕಿನ ಆನೇಕೆರೆ ದೇವಾಲಯ ಮತ್ತು ಯಲಿಯೂರು ಗ್ರಾಮದ ದೇವಿರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಹೆಲಿಕ್ಯಾಪ್ಟರ್ ಮೂಲಕ ಶೃಂಗೇರಿಗೆ ತೆರಳಿದ ಅನಿತಾ, ನಿಖಿಲ್ ಶಾರದಾಂಬೆ ದೇವಾಯಲಕ್ಕೆ ಕೂಡಾ ಭೇಟಿ ನೀಡಿದ್ದಾರೆ.