Asianet Suvarna News Asianet Suvarna News

ದೇಶ, ಪಕ್ಷ ಮೊದಲು ಎಂಬುದೇ ನನ್ನ ಸಿದ್ಧಾಂತ: ತೇಜಸ್ವಿನಿ ಪ್ರತಿಕ್ರಿಯೆ!

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದಕ್ಕೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿನಿ ಅನಂತ್ ಕುಮಾರ್, ವೈಯಕ್ತಿಕ ಹಿತಾಸಕ್ತಿಗಿಂತ ದೇಶ ಮತ್ತು ಪಕ್ಷ ಮೊದಲು ಎಂದು ಹೇಳಿದ್ದಾರೆ. ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನವಿಲ್ಲ ಎಂದು ತೇಜಸ್ವಿನಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು(ಮಾ.26): ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದಕ್ಕೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿನಿ ಅನಂತ್ ಕುಮಾರ್, ವೈಯಕ್ತಿಕ ಹಿತಾಸಕ್ತಿಗಿಂತ ದೇಶ ಮತ್ತು ಪಕ್ಷ ಮೊದಲು ಎಂದು ಹೇಳಿದ್ದಾರೆ. ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನವಿಲ್ಲ ಎಂದಿರುವ ತೇಜಸ್ವಿನಿ, ಪಕ್ಷದ ವರಿಷ್ಠರು ಕೈಗೊಂಡ ನಿರ್ಧಾರಕ್ಕೆ ಬದ್ಧ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ಅವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿಯೂ ತೇಜಸ್ವಿನಿ ಅನಂತ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ....