ಚಂದನ್-ನಿವೇದಿತಾ ಜೋಡಿಯ ಹೊಸ ಹೆಜ್ಜೆ ‘ನಾದ ಯೋಗಿ’: ಏನಿದರ ವೈಶಿಷ್ಟ್ಯತೆ?
ಕನ್ನಡ ಚಿತ್ರರಂಗದ ರ್ಯಾಪರ್ ಯುವ ಸಂಗೀತ ಪ್ರೇಮಿಗಳ ಫೇವರಿಟ್....ಸಂಗೀತ ನಿರ್ದೇಶಕ, ಗಾಯಕ ಹಾಗೂ ಈಗ ನಾಯಕನಾಗೂ ಚಂದನ್ ಶೆಟ್ಟಿ ಜನಪ್ರಿಯ. ಕಳೆದ ಎಂಟು ವರ್ಷಗಳ ಹಿಂದೆ ಚಂದನ್ ಶೆಟ್ಟಿ ತಮ್ಮ ಹುಟ್ಟುಹಬ್ಬದ ದಿನ ತಮ್ಮ ಮೊದಲ ಹಾಡು ಬಿಡುಗಡೆ ಮಾಡಿದ್ದರು.
ಕನ್ನಡ ಚಿತ್ರರಂಗದ ರ್ಯಾಪರ್ ಯುವ ಸಂಗೀತ ಪ್ರೇಮಿಗಳ ಫೇವರಿಟ್....ಸಂಗೀತ ನಿರ್ದೇಶಕ, ಗಾಯಕ ಹಾಗೂ ಈಗ ನಾಯಕನಾಗೂ ಚಂದನ್ ಶೆಟ್ಟಿ ಜನಪ್ರಿಯ. ಕಳೆದ ಎಂಟು ವರ್ಷಗಳ ಹಿಂದೆ ಚಂದನ್ ಶೆಟ್ಟಿ ತಮ್ಮ ಹುಟ್ಟುಹಬ್ಬದ ದಿನ ತಮ್ಮ ಮೊದಲ ಹಾಡು ಬಿಡುಗಡೆ ಮಾಡಿದ್ದರು. ಈ ಬಾರಿಯ ಹುಟ್ಟುಹಬ್ಬದಂದು ನಾದಯೋಗಿ ಎಂಬ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ. ಈ ನೂತನ ಯೂಟ್ಯೂಬ್ ಚಾನಲ್ ಗೆ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಚಾಲನೆ ನೀಡಿದರು. ಗಣಪತಿ ಹಬ್ಬದ ಸಂದರ್ಭದಲ್ಲಿ ಗಣಪತಿಯನ್ನು ಕುರಿತಾದ "ಗಂ ಗಣಪತಿ" ಹಾಡಿನೊಂದಿಗೆ ಚಾನಲ್ ಆರಂಭವಾಗಿದೆ.
ಯುವಜನತೆಗೆ ಆಧ್ಯಾತ್ಮಿಕತೆಯನ್ನು ಪರಿಚಯಿಸುವ ಸಲುವಾಗಿ "ನಾದಯೋಗಿ" ಚಾನಲನ್ನು ಆರಂಭಿಸಿದ್ದೇನೆ. ಇದಕ್ಕೆ ನನಗೆ ಮೈಸೂರಿನ ಅರ್ಜುನ್ ಅವದೂತರು ಪ್ರೇರಣೆ ಎಂದಿದ್ದಾರೆ. ಮೊದಲ ಗೀತೆಯಾಗಿ "ಗಂ ಗಣಪತಿ" ಎಂಬ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಮುಂದೆ ಹನುಮ, ಶಿವ ಸೇರಿದಂತೆ ಅನೇಕ ದೇವರುಗಳ ಹಾಡುಗಳನ್ನು ಬಿಡುಗಡೆ ಮಾಡುತ್ತಾರಂತೆ. ಈಗ ಬಿಡುಗಡೆಯಾಗಿರುವ ಗಣಪತಿ ಹಾಡಿನಲ್ಲಿ ನಲವತ್ತೆಂಟು ಗಣಪತಿ ನಾಮಗಳಿವೆ ಎಂದಿದ್ದಾರೆ ಚಂದನ್ ಶೆಟ್ಟಿ.