
ಮಡಿಕೇರಿಯಲ್ಲಿ ವೆಂಕಟ್ ಹುಚ್ಚಾಟ; ಸ್ಥಳೀಯರಿಂದ ಬಿತ್ತು ಗೂಸಾ!
ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಹುಚ್ಚ ವೆಂಕಟ್ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.ಮಡಿಕೇರಿಯಲ್ಲಿ ಹುಚ್ಚ ವೆಂಕಟ್ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ.ಮಡಿಕೇರಿ ನಗರದ KSRTC ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.ಹುಚ್ಚ ವೆಂಕಟ್ ಗೆ ಚಿಕಿತ್ಸೆಯ ಅಗತ್ಯವಿದೆ. ಕುಟುಂಬದವರು, ಸ್ನೇಹಿತರು ಈ ಬಗ್ಗೆ ಗಮನ ವಹಿಸಬೇಕಾಗಿದೆ.
ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಹುಚ್ಚ ವೆಂಕಟ್ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಡಿಕೇರಿಯಲ್ಲಿ ಹುಚ್ಚ ವೆಂಕಟ್ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ.ಮಡಿಕೇರಿ ನಗರದ KSRTC ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.ಹುಚ್ಚ ವೆಂಕಟ್ ಗೆ ಚಿಕಿತ್ಸೆಯ ಅಗತ್ಯವಿದೆ. ಕುಟುಂಬದವರು, ಸ್ನೇಹಿತರು ಈ ಬಗ್ಗೆ ಗಮನ ವಹಿಸಬೇಕಾಗಿದೆ.