ಭಜರಂಗಿ -2 ಅ. 29 ಕ್ಕೆ ತೆರೆಗೆ, ಪ್ರೀ ರಿಲೀಸ್ ಕಾರ್ಯಕ್ರಮ ಹೀಗಿತ್ತು
ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ನಟನೆಯ ‘ಭಜರಂಗಿ 2’ ಇದೇ ತಿಂಗಳು 29ಕ್ಕೆ ಸಿನಿಮಾ ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಈಗಾಗಲೇ ಪ್ರತಿಷ್ಠಿತ ಐಎಂಡಿಬಿಯಲ್ಲಿ ಬಹು ನಿರೀಕ್ಷೆಯ ಚಿತ್ರಗಳ ವಿಭಾಗದಲ್ಲಿ ಎರಡನೇ ಸ್ಥಾನದಲ್ಲಿರುವ ಈ ಚಿತ್ರ, ಕನ್ನಡ ಚಿತ್ರರಂಗದಲ್ಲೂ ಕುತೂಹಲ ಹೆಚ್ಚಿಸಿದೆ.
ಬೆಂಗಳೂರು (ಅ. 27): ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ನಟನೆಯ ‘ಭಜರಂಗಿ 2’ ಇದೇ ತಿಂಗಳು 29ಕ್ಕೆ ಸಿನಿಮಾ ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಈಗಾಗಲೇ ಪ್ರತಿಷ್ಠಿತ ಐಎಂಡಿಬಿಯಲ್ಲಿ ಬಹು ನಿರೀಕ್ಷೆಯ ಚಿತ್ರಗಳ ವಿಭಾಗದಲ್ಲಿ ಎರಡನೇ ಸ್ಥಾನದಲ್ಲಿರುವ ಈ ಚಿತ್ರ, ಕನ್ನಡ ಚಿತ್ರರಂಗದಲ್ಲೂ ಕುತೂಹಲ ಹೆಚ್ಚಿಸಿದೆ.
ಭಜರಂಗಿ ಹವಾ.. ವಿನೋದ್ ರಾಜ್, ಯಶ್ ಕೊಂಡಾಡಿದ ಶಿವಣ್ಣ
ನಿರ್ಮಾಪಕ ಜಯಣ್ಣ ಹಾಗೂ ಭೋಗೇಂದ್ರ ಅವರು ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದು, ಎ ಹರ್ಷ ನಿರ್ದೇಶನ ಮಾಡಿದ್ದಾರೆ. ಇವರ ಕಾಂಬಿನೇಶನ್‌ನ ಚಿತ್ರಗಳು ಈ ಹಿಂದೆ ಹಿಟ್ ಆಗಿದ್ದು, ‘ಭಜರಂಗಿ 2’ ಚಿತ್ರ ಕೂಡ ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣುತ್ತದೆ ನಂಬಿಕೆ ಚಿತ್ರತಂಡದ್ದು.