ವಿಶ್ವಸಂಸ್ಥೆಯಲ್ಲಿ ಕನ್ನಡದ ಕಂಪು ಪಸರಿಸಿದ ರಿಷಬ್‌ ಶೆಟ್ಟಿ: ಪರಿಸರದ ಬಗ್ಗೆ ನುಡಿ!

ವಿಶ್ವಸಂಸ್ಥೆಯಲ್ಲಿ ಕನ್ನಡ ಡಿಂಡಿಮ ಮೊಳಗಲಿದ್ದು, ‘ಕಾಂತಾರ’ ಖ್ಯಾತಿಯ ಖ್ಯಾತ ನಟ ಹಾಗೂ ಚಿತ್ರ ನಿರ್ಮಾಣಕಾರ ರಿಷಬ್‌ ಶೆಟ್ಟಿ ಅವರು ಕನ್ನಡದಲ್ಲೇ ಭಾಷಣ ಮಾಡಿದ್ದಾರೆ. ವಿಶ್ವಸಂಸ್ಥೆಯ ವೇದಿಕೆಯಲ್ಲಿ ಕನ್ನಡ ದನಿ ಪಸರಿಸುವ ಕಾರ್ಯವನ್ನು ರಿಷಬ್ ಶೆಟ್ಟಿ ಮಾಡಿದರು. 

First Published Mar 16, 2023, 10:21 PM IST | Last Updated Mar 16, 2023, 10:21 PM IST

ವಿಶ್ವಸಂಸ್ಥೆಯಲ್ಲಿ ಕನ್ನಡ ಡಿಂಡಿಮ ಮೊಳಗಲಿದ್ದು, ‘ಕಾಂತಾರ’ ಖ್ಯಾತಿಯ ಖ್ಯಾತ ನಟ ಹಾಗೂ ಚಿತ್ರ ನಿರ್ಮಾಣಕಾರ ರಿಷಬ್‌ ಶೆಟ್ಟಿ ಅವರು ಕನ್ನಡದಲ್ಲೇ ಭಾಷಣ ಮಾಡಿದ್ದಾರೆ. ವಿಶ್ವಸಂಸ್ಥೆಯ ವೇದಿಕೆಯಲ್ಲಿ ಕನ್ನಡ ದನಿ ಪಸರಿಸುವ ಕಾರ್ಯವನ್ನು ರಿಷಬ್ ಶೆಟ್ಟಿ ಮಾಡಿದರು. ಈ ಬಾರಿ ಸರಳ ಭಾರತೀಯ ಉಡುಗೆ ಬಿಳಿಯ ಬಣ್ಣದ ಖುರ್ತಾ ಧರಿಸಿ ಅದಕ್ಕೊಪ್ಪುವ ನೀಲಿ ಬಣ್ಣದ ವೇಸ್ ಕೋಟು ಧರಿಸಿದ್ದ ರಿಷಬ್ ಶೆಟ್ಟಿ, ಭಾಷಣ ಆರಂಭಿಸಿದರು. ಈ ಸಭೆಯಲ್ಲಿ ಭಾಷಣಕಾರರಿಗೆ ಸೀಮಿತ ಸಮಯ ನೀಡುವ ಕಾರಣ, ತುಸು ವೇಗವಾಗಿ ಭಾಷಣ ಓದಲು ಆರಂಭಿಸಿದ ರಿಷಬ್, ನಮಸ್ಕಾರ ನಾನು ರಿಷಬ್ ಶೆಟ್ಟಿ. ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತಲೂ ಹೆಚ್ಚು ಕಾಲದಿಂದ ತಳಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತದ ಇಕೋಫಾರ್ಮ್ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ಪರಿಸರ ಸ್ವಚ್ಛತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ, ನಿರ್ದೇಶಕನಾಗಿ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದು ನನ್ನ ಉದ್ದೇಶ ಎಂದು ನಟ ಮಾತನಾಡಿದ್ದಾರೆ.

Video Top Stories