ಪುನೀತ್ ಗಂಧದ ಗುಡಿಗೆ ಪ್ರೀ-ಬುಕಿಂಗ್ ಆರಂಭ: ಅಪ್ಪು ಹಬ್ಬಕ್ಕೆ ಸಾಕ್ಷಿ ಆಗಲಿದೆ ಅಕ್ಟೋಬರ್ 28!

ಸ್ಯಾಂಡಲ್‌ವುಡ್‌ನಲ್ಲಿ ಇತ್ತಿಚೆಗಷ್ಟೆ ಅರಮನೆ ಮೈದಾನದಲ್ಲಿ ನಡೆದ ಪುನೀತ ಪರ್ವ ಗಂಧದ ಗುಡಿ ಪ್ರೀ-ರಿಲೀಸ್ ಇವೆಂಟ್‌ಗೆ ದೊಡ್ಡ ಮಟ್ಟದಲ್ಲಿ ಅಭಿಮಾನಿಗಳು ಸೇರಿದ್ದರು. ಈ ಮೂಲಕ ಈ ಸಾಕ್ಷ್ಯಚಿತ್ರದ ಬಗ್ಗೆ ಎಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ ಎಂಬುದನ್ನು ಸಾಬೀತುಪಡಿಸಿದ್ದರು.

First Published Oct 27, 2022, 8:52 PM IST | Last Updated Oct 27, 2022, 8:52 PM IST

ಸ್ಯಾಂಡಲ್‌ವುಡ್‌ನಲ್ಲಿ ಇತ್ತಿಚೆಗಷ್ಟೆ ಅರಮನೆ ಮೈದಾನದಲ್ಲಿ ನಡೆದ ಪುನೀತ ಪರ್ವ ಗಂಧದ ಗುಡಿ ಪ್ರೀ-ರಿಲೀಸ್ ಇವೆಂಟ್‌ಗೆ ದೊಡ್ಡ ಮಟ್ಟದಲ್ಲಿ ಅಭಿಮಾನಿಗಳು ಸೇರಿದ್ದರು. ಈ ಮೂಲಕ ಈ ಸಾಕ್ಷ್ಯಚಿತ್ರದ ಬಗ್ಗೆ ಎಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ ಎಂಬುದನ್ನು ಸಾಬೀತುಪಡಿಸಿದ್ದರು. ಗಂಧದ ಗುಡಿ ಸಾಕ್ಷ್ಯಚಿತ್ರ ಅಪ್ಪು  ದೊಡ್ಡ ಕನಸು. ಅಪ್ಪು ಪುಣ್ಯತಿಥಿಗೆ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಈ ಡಾಕ್ಯುಮೆಂಟರಿ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಈ ಕ್ಷಣಕ್ಕಾಗಿ ಅಭಿಮಾನಿಗಳು ಹಲವು ತಿಂಗಳಿಂದ ಕಾದಿದ್ದರು. ಪುನೀತ್ ಅವರನ್ನು ದೊಡ್ಡ ಪರದೆಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳಿಗೆ ಇದು ಕೊನೆಯ ಅವಕಾಶ. ಈ ಕಾರಣದಿಂದ ಫ್ಯಾನ್ಸ್ ಈ ಸಾಕ್ಷ್ಯಚಿತ್ರಕ್ಕಾಗಿ ಕಾದಿದ್ದಾರೆ. ಈಗ ‘ಗಂಧದ ಗುಡಿ’ಗೆ ಆನ್‌ಲೈನ್‌ನಲ್ಲಿ ಪ್ರೀ ಬುಕಿಂಗ್ ಆರಂಭ ಆಗಿದೆ. 

ಶುಕ್ರವಾರ ‘ಗಂಧದ ಗುಡಿ’ ರಿಲೀಸ್ ಆಗುತ್ತಿದೆ. ಈ ಸಾಕ್ಷ್ಯ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈಗಾಗಲೇ ಸಿನಿಮಾದ ಪ್ರೀಮಿಯರ್ ಶೋ ಟಿಕೆಟ್ಸ್ ಸೋಲ್ಡ್ ಔಟ್ ಆಗಿವೆ. ಹಾಗೆಯೇ ‘ಬುಕ್ ಮೈ ಶೋ’ನಲ್ಲಿ ‘ಗಂಧದ ಗುಡಿ’ಗೆ ಟಿಕೆಟ್ ಬುಕಿಂಗ್ ಆರಂಭ ಆಗಿದೆ. ಈ ಸಾಕ್ಷ್ಯಚಿತ್ರದ ಅವಧಿ ಕೇವಲ 1 ಗಂಟೆ 37 ನಿಮಿಷ ಇದೆ. ಹೀಗಾಗಿ, ಹಲವು ಚಿತ್ರಮಂದಿರಗಳಲ್ಲಿ ಐದು ಶೋ ಇಡಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ. ಕರುನಾಡಿನ ವನ್ಯಜೀವಿ, ಪ್ರಕೃತಿ ಸಂಪತ್ತು, ಕಾಡು, ಗುಡ್ಡ-ಬೆಟ್ಟವನ್ನು ‘ಗಂಧದಗುಡಿ’ಯಲ್ಲಿ ಅದ್ಭುತವಾಗಿ ಸೆರೆಹಿಡಿಯಲಾಗಿದೆ. ಪುನೀತ್ ರಾಜ್‍ಕುಮಾರ್ ಅವರಿಗೆ ಅಮೋಘವರ್ಷ ಅವರು ಸಾಥ್ ನೀಡಿದ್ದಾರೆ. ಟಿಕೆಟ್ ಮುಂಗಡ ಬುಕಿಂಗ್  ಮಾಡಿಕೊಳ್ಳಲು ಅಶ್ವಿನಿ ಪುನೀತ್ ರಾಜ್‍ಕುಮಾರ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಮನವಿ ಮಾಡಿದ್ದಾರೆ. ಪ್ರೀ ರಿಲೀಸ್ ಕಾರ್ಯಕ್ರಮ ಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದರಿಂದ ಸಿನಿಮಾ ರಿಲೀಸ್‌ಗೂ ಅಷ್ಟೇ ಪ್ರತಿಕ್ರಿಯೆ ಸಿಗಲಿದೆ ಎನ್ನಲಾಗಿದ್ದು ಈಗಾಗಲೆ ಪೇಯ್ಡ್ ಪ್ರೀಮಿಯರ್ ಶೋ ಎಲ್ಲ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿರುವುದೆ ಇದಕ್ಕೆ ಸಾಕ್ಷಿ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment