ಕುತೂಹಲಗಳ ಆಗರ ಶಿವಾಜಿ ಸುರತ್ಕಲ್ 2: ಸರಣಿ ಕೊಲೆ ಹಂತಕನ ಹಿಂದೆ ಬಿದ್ದ ರಮೇಶ್‌ ಅರವಿಂದ್

ಮೂರು ವರ್ಷಗಳ ಹಿಂದೆ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದ್ದ ರಮೇಶ್ ಅರವಿಂದ್ ಅಭಿನಯದ ಪತ್ತೇದಾರಿ ಚಿತ್ರ ‘ಶಿವಾಜಿ ಸುರತ್ಕಲ್’ ಮುಂದುವರೆದ ಭಾಗ ‘ಶಿವಾಜಿ ಸುರತ್ಕಲ್-ದಿ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ’ ಇದೇ ಶುಕ್ರವಾರ (ಏಪ್ರಿಲ್ 14) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. 

First Published Apr 13, 2023, 10:01 PM IST | Last Updated Apr 13, 2023, 10:01 PM IST

ಮೂರು ವರ್ಷಗಳ ಹಿಂದೆ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದ್ದ ರಮೇಶ್ ಅರವಿಂದ್ ಅಭಿನಯದ ಪತ್ತೇದಾರಿ ಚಿತ್ರ ‘ಶಿವಾಜಿ ಸುರತ್ಕಲ್’ ಮುಂದುವರೆದ ಭಾಗ ‘ಶಿವಾಜಿ ಸುರತ್ಕಲ್-ದಿ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ’ ಇದೇ ಶುಕ್ರವಾರ (ಏಪ್ರಿಲ್ 14) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‘ಶಿವಾಜಿ ಸುರತ್ಕಲ್ 2’ ಚಿತ್ರವನ್ನು ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಮೂಲಕ ರೇಖಾ ಕೆ.ಎನ್ ಮತ್ತು ಅನೂಪ್ ಗೌಡ ನಿರ್ಮಿಸಿದ್ದಾರೆ. ಆಕಾಶ್ ಶ್ರೀವತ್ಸ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮೊದಲ ಭಾಗದಂತೆಯೇ ಈ ಚಿತ್ರವು ಸಹ ಒಂದು ಮರ್ಡರ್ ಮಿಸ್ಟ್ರಿಯಾಗಿದ್ದು, ಚಿತ್ರದಲ್ಲಿ ನಡೆಯುವ ಕೊಲೆಗಳಿಗೂ, ನಾಯಕ ಶಿವಾಜಿಗೂ ಒಂದು ನಂಟಿರುತ್ತದೆ. ಆ ನಂಟೇನು? ಕೊಲೆಗಳ ಹಿಂದಿರುವ ರಹಸ್ಯವೇನು? ಮತ್ತು ಕೊಲೆಗಾರ ಯಾರು? ಎಂಬುದೇ ಈ ಚಿತ್ರದ ಹೂರಣ. ಇನ್ನು ಈ ಚಿತ್ರದಲ್ಲಿ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್, ಸಂಗೀತ ಶೃಂಗೇರಿ, ರಮೇಶ್ ಭಟ್, ವೀಣಾ ಸುಂದರ್, ವಿನಾಯಕ್ ಜೋಶಿ, ಶೋಭರಾಜ್ ಮುಂತಾದದವರು ನಟಿಸಿದ್ದಾರೆ. ರೇಖಾ ಕೆ.ಎನ್. ಮತ್ತು ಅನೂಪ್ ಗೌಡ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ.