ಯೋಗರಾಜ್‌ಭಟ್ಟರ ಸಾರಥ್ಯದಲ್ಲಿ ಮಲ್ಟಿಸ್ಟಾರರ್ ಚಿತ್ರ: ಮೊದಲ ಬಾರಿಗೆ ಒಂದಾದ ಪ್ರಭುದೇವ-ಶಿವಣ್ಣ

ಕರುನಾಡ ಚಕ್ರವರ್ತಿ ಶಿವರಾಜ್​​​ಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಖ್ಯಾತಿಯ ಪ್ರಭುದೇವ ಅಭಿನಯದ ಮುಂದಿನ ಬಹುನಿರೀಕ್ಷಿತ ಸಿನಿಮಾ ಕರಟಕ ದಮನಕ. ಶೀರ್ಷಿಕೆಯಿಂದಲೇ ಸೌತ್ ಸಿನಿಮಾ ರಂಗದಲ್ಲಿ ಗಮನ ಸೆಳೆಯುತ್ತಿರುವ ಈ ಚಿತ್ರವನ್ನು ವಿಕಟಕವಿ ಯೋಗರಾಜ್ ಭಟ್ ನಿರ್ದೇಶಿಸುತ್ತಿದ್ದಾರೆ. 

Share this Video
  • FB
  • Linkdin
  • Whatsapp

ಕರುನಾಡ ಚಕ್ರವರ್ತಿ ಶಿವರಾಜ್​​​ಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಖ್ಯಾತಿಯ ಪ್ರಭುದೇವ ಅಭಿನಯದ ಮುಂದಿನ ಬಹುನಿರೀಕ್ಷಿತ ಸಿನಿಮಾ ಕರಟಕ ದಮನಕ. ಶೀರ್ಷಿಕೆಯಿಂದಲೇ ಸೌತ್ ಸಿನಿಮಾ ರಂಗದಲ್ಲಿ ಗಮನ ಸೆಳೆಯುತ್ತಿರುವ ಈ ಚಿತ್ರವನ್ನು ವಿಕಟಕವಿ ಯೋಗರಾಜ್ ಭಟ್ ನಿರ್ದೇಶಿಸುತ್ತಿದ್ದಾರೆ. ಮಾಸ್ ಎಂಟರ್ಟೈನ್ಮೆಂಟ್ ಸಿನಿಮಾ ಕುರಿತು ಪ್ರೇಕ್ಷಕರಲ್ಲಿ ಕುತೂಹಲ ಮೂಡಿದೆ. ಇಂದಿಗೆ ಈ ಚಿತ್ರ ಪ್ರಾರಂಭವಾಗಿ ಒಂದು ವರ್ಷಗಳಾಗಿದೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, ಕರಟಕ ದಮನಕ ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. 

Add Asianetnews Kannada as a Preferred SourcegooglePreferred

ಸಾಮಾನ್ಯವಾಗಿ ಇಬ್ಬರನ್ನು ಹೆಚ್ಚು ಸಲ ಒಟ್ಟಾಗಿ ನೋಡಿದಾಗ ಕರಟಕ ದಮನಕ ಎನ್ನುವುದು ಉಂಟು. ನಮ್ಮ ಚಿತ್ರದಲ್ಲಿ ಈ ಪಾತ್ರಗಳನ್ನು ಶಿವಣ್ಣ ಹಾಗೂ ಪ್ರಭುದೇವ ನಿರ್ವಹಿಸಿದ್ದಾರೆ. ಅವರಿಬ್ಬರ ಎನರ್ಜಿ ನೋಡಿದರೆ ನಿಜಕ್ಕೂ ಖುಷಿಯಾಗುತ್ತದೆ. ರಾಕ್ ಲೈನ್ ವೆಂಕಟೇಶ್ ಅವರು ಅದ್ಧೂರಿಯಾಗಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ವಿ. ಹರಿಕೃಷ್ಣ ಸಂಗೀತ ಸಂಯೋಜನೆಯ ಏಳು ಹಾಡುಗಳು ನಮ್ಮ ಚಿತ್ರದಲ್ಲಿವೆ. ನಾನು ಹಾಗೂ ರಾಕ್ ಲೈನ್ ವೆಂಕಟೇಶ್ ಸಹ ಚಿತ್ರದಲ್ಲಿ ನಟಿಸಿದ್ದೇವೆ. ಶೇ. 90ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ. ಸಾಂಗ್​ ಶೂಟಿಂಗ್​​ ಮಾತ್ರ ಬಾಕಿ ಇದೆ' ಎಂದು ಮಾಹಿತಿ ನೀಡಿದರು.

Related Video