Asianet Suvarna News Asianet Suvarna News

ಕರ್ನಾಟಕ ತಮಿಳುನಾಡು ಗಡಿಯಲ್ಲಿ ಚಿತ್ರಿಕರಿಸಲಾದ 'ದಿ ಎಲಿಫೆಂಟ್ ವಿಸ್ಪರರ್ಸ್'ಗೆ ಆಸ್ಕರ್ ಗರಿ

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆದ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ.

First Published Mar 14, 2023, 3:33 PM IST | Last Updated Mar 14, 2023, 3:44 PM IST

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆದ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಭಾರತದ ಮೊದಲ ಡಾಕ್ಯುಮೆಂಟರಿ ಎಂಬ ಖ್ಯಾತಿಗೂ ‘ದಿ ಎಲಿಫೆಂಟ್ ವಿಸ್ಪರರ್ಸ್’ ಪಾತ್ರವಾಗಿದೆ. ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರವನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದ್ದಾರೆ. ಸಿಖ್ಯ ಎಂಟರ್‌ಟೈನ್‌ಮೆಂಟ್‌ನ ಗುನೀತ್ ಮೊಂಗಾ ಮತ್ತು ಅಚಿನ್ ಜೈನ್ ನಿರ್ಮಾಣದಲ್ಲಿ ಈ ಕಿರು ಚಿತ್ರ ಮೂಡಿಬಂದಿದೆ. ಸ್ಥಳೀಯ ದಂಪತಿಗಳಾದ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ.