ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ?
ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
ಶ್ರೀ ಶೋಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ಗುರುವಾರ, ಅಮಾವಾಸ್ಯೆ ತಿಥಿ, ಪೂರ್ವಾಷಾಢ ನಕ್ಷತ್ರ. ಮೇಷ ರಾಶಿಗೆ ಹಿರಿಯರ ಸಲಹೆಯನ್ನು ಪಾಲಿಸುವುದು ಸರಿಯಾದ ಮಾರ್ಗದರ್ಶನವನ್ನು ನೀಡುತ್ತದೆ. ಮಿಥುನ ರಾಶಿಯವರು ಪ್ರತಿಕೂಲ ಸಂದರ್ಭಗಳಲ್ಲಿ ತಾಳ್ಮೆ ಮತ್ತು ಸಂಯಮದಿಂದ ಕೆಲಸ ಮಾಡಿ. ಸಿಂಹ ರಾಶಿಗೆ ಅಮೂಲ್ಯ ಉಡುಗೊರೆಗಳು ನಿಮಗೆ ಬರಬಹುದು.