Asianet Suvarna News Asianet Suvarna News

ತುಮಕೂರಿನ ಮಾವಿನಕೆರೆ ಜಾತ್ರೆಯಲ್ಲಿ ಕಾಲ್ತುಳಿತ, 30 ಭಕ್ತರು ಅಸ್ವಸ್ಥ

ತುಮಕೂರು ಜಿಲ್ಲೆ, ತುರುವೇಕೆರೆ ತಾಲ್ಲೂಕಿನ ಮಾವಿನಕೆರೆ ಗ್ರಾಮದಲ್ಲಿ ಜಾತ್ರಾ ಮಹೋತ್ಸವದಲ್ಲಿ ನೂಕು ನುಗ್ಗಲು ಉಂಟಾಗಿ ಬರೋಬ್ಬರಿ 30 ಮಂದಿಗೆ ಗಾಯವಾಗಿದೆ.

ತುಮಕೂರು (ಜೂ.07): ತುಮಕೂರು ಜಿಲ್ಲೆ, ತುರುವೇಕೆರೆ ತಾಲ್ಲೂಕಿನ ಮಾವಿನಕೆರೆ ಗ್ರಾಮದಲ್ಲಿ ಜಾತ್ರಾ ಮಹೋತ್ಸವದಲ್ಲಿ ನೂಕು ನುಗ್ಗಲು ಉಂಟಾಗಿ ಬರೋಬ್ಬರಿ 30 ಮಂದಿಗೆ ಗಾಯವಾಗಿದೆ. ರಾಮಲಿಂಗೇಶ್ವರ ಮತ್ತು ಚೌಡೇಶ್ವರಿ ಜಾತ್ರಾ ಮಹೋತ್ಸವದ ವೇಳೆ ಈ ಘಟನೆ ನಡೆದಿದೆ. ಇನ್ನು ಕಳೆದ 35 ವರ್ಷಗಳ ಬಳಿಕ ಈ ಜಾತ್ರೆಯು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಆದರೆ, ಈ ವೇಳೆ ಜನರ ಸಂಖ್ಯೆ ಮಿತಿಗಿಂತ ಹೆಚ್ಚಾಗಿದ್ದರಿಂದ ನೂಕುನುಗ್ಗಲು ಉಂಟಾಗಿದ್ದು, 30 ಮಂದಿ ಕಾಲ್ತುಳಿತಕ್ಕೆ ಒಳಗಾಗಿ ಗಾಯಗೊಂಡಿದ್ದಾರೆ. ಇನ್ನು ಗಾಯಾಳುಗಳನ್ನು ತುರುವೇಕೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.