ಅಬ್ಬಬ್ಬಾ ಇದೆಂತಹ ಹಬ್ಬ ಸತ್ತವನು ಮತ್ತೆ ಎದ್ದು ಬರುವ ಬಲಿ ಹಬ್ಬ

  • ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ವಿಚಿತ್ರ ಆಚರಣೆ
  • ಬಲಿ ಕೊಟ್ಟ ಮನುಷ್ಯ ಒಂಭತ್ತು ಗಂಟೆ ಬಳಿಕ ಎದ್ದು ಬರುತ್ತಾನೆ
  • ಗ್ರಾಮದ ಸೀಗ ಮಾರಮ್ಮ ಹಬ್ಬದಲ್ಲಿ ವಿಚಿತ್ರ ಆಚರಣೆ
First Published May 10, 2022, 5:19 PM IST | Last Updated May 10, 2022, 5:19 PM IST

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ವಿಚಿತ್ರ ಆಚರಣೆಯೊಂದು ನಡೆಯುತ್ತದೆ. ಈ ಗ್ರಾಮದಲ್ಲಿ ನಡೆಯುವ ಸೀಗ ಮಾರಮ್ಮ ಹಬ್ಬದಲ್ಲಿ ಬಲಿ ಹಬ್ಬ ಆಚರಣೆ ನಡೆಯುತ್ತದೆ. ಜೀವ ಹೋದ ವ್ಯಕ್ತಿಯ ಶವವನ್ನು ಊರ ತುಂಬಾ ಮೆರವಣಿಗೆ ಮಾಡುತ್ತಾರೆ. ಬಲಿ ನೀಡುವ ದಿನ ಬಲಿ ಬೀಳುವ ವ್ಯಕ್ತಿಯನ್ನು ಗ್ರಾಮಕ್ಕೆ ಕರೆದೊಯ್ಯಲಾಗುತ್ತದೆ. ಈ ವೇಳೆ ಸೀಗಮಾರಮ್ಮ ದೇವತೆ ಮೈಮೇಲೆ ಬಂದ ಅರ್ಚಕರು ಬಲಿ ಬೀಳುವ ವ್ಯಕ್ತಿಗೆ ಅಕ್ಕಿ ಕಾಳು ಎಸೆಯುತ್ತಾರೆ. ಆ ವೇಳೆ ಅರ್ಧ ಜೀವ ಹೋಗುತ್ತದೆ. ಅರೆ ಜೀವವಾದ ವ್ಯಕ್ತಿಯನ್ನು ಮತ್ತೆ ಬಲಿ ಮನೆಗೆ ಕರೆತಂದು ಬಲಿ ಮನೆಯಲ್ಲಿ ಮಲಗಿಸಲಾಗುತ್ತದೆ. ಈ ವೇಳೆ ಸೀಗೆಮಾರಮ್ಮ ದೇವತೆ ಮೈಮೇಲೆ ಬರುವ ಅರ್ಚಕ ಆವೇಷದಿಂದ ಬಲಿ ವ್ಯಕ್ತಿಯ ಮೇಲೆ ಕಾಲಿಡುತ್ತಾರೆ. ಆ ಸಂದರ್ಭದಲ್ಲಿ ಆ ಬಲಿ ವ್ಯಕ್ತಿಯ ಜೀವ ಹೋಗುತ್ತದೆ ಎನ್ನುವ ನಂಬಿಕೆಯಿದೆ. ಹೀಗೆ ರಾತ್ರಿ ಆ ವ್ಯಕ್ತಿಯನ್ನು ಊರತುಂಬೆಲ್ಲಾ ಮೆರವಣಿಗೆ ಮಾಡುತ್ತಾರೆ. ಮೆರವಣಿಗೆ ವೇಳೆ ಶವವನ್ನು ಎಸೆಯಲಾಗುತ್ತದೆ. ಸತತ 9 ತಾಸು ಆತನ ಉಸಿರಾಟ ನಿಂತು ಹೋಗಿರುತ್ತದೆ. ಆದರೆ ಹೀಗೆ ಬಲಿ ಬಿದ್ದ ವ್ಯಕ್ತಿಗೆ ಬೆಳಗ್ಗೆ ಮತ್ತೆ ಮರುಜೀವ ಬರುತ್ತದೆ.