ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ವ್ಯಕ್ತಿಗೆ ಹಾರ್ಟ್‌ ಅಟ್ಯಾಕ್!

ಜಿಮ್‌ನಲ್ಲಿ, ಡ್ಯಾನ್ಸ್‌ ಮಾಡುತ್ತಿರುವಾಗ, ಮದ್ವೆ ಮನೆಯಲ್ಲಿ ಹೀಗೆ ಎಲ್ಲೆಂದರಲ್ಲಿ ಜನರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಹೀಗಿರುವಾಗ್ಲೇ ಬೆಂಗಳೂರಲ್ಲೊಬ್ಬ ವ್ಯಕ್ತಿ ಬಿಎಂಟಿಸಿ ಬಸ್‌ನಲ್ಲೇ ಹಾರ್ಟ್‌ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ.

First Published Mar 8, 2023, 3:59 PM IST | Last Updated Mar 8, 2023, 3:59 PM IST

ಇತ್ತೀಚಿನ ವರ್ಷಗಳಲ್ಲಿ ಹಾರ್ಟ್‌ಅಟ್ಯಾಕ್‌ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಹೋದಲ್ಲಿ, ಬಂದಲ್ಲಿ ಕುಸಿದುಬಿದ್ದು ಹೃದಯಾಘಾತವಾಗಿ ಹಲವರು ಸಾವನ್ನಪ್ಪುತ್ತಿದ್ದಾರೆ. ಬಿಎಂಟಿಸಿ ಬಸ್‌ನಲ್ಲಿ ಕುಳಿತಿದ್ದಾಗ ಹೃದಯಾಘಾತವಾಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೇರಳದಿಂದ ಬೆಂಗಳೂರಿಗೆ ಬಂದಿದ್ದ 61 ವರ್ಷದ ಅಬ್ದುಲ್ ಖಾದಿರ್ ಎಂಬವರಿಗೆ ಹಾರ್ಟ್‌ ಅಟ್ಯಾಕ್ ಆಗಿದೆ. ಯಶವಂತಪುರ ರೈಲ್ವೇ ನಿಲ್ದಾಣದಿಂದ ಮೆಜೆಸ್ಟಿಕ್‌ಗೆ ಬರುತ್ತಿದ್ದ ವ್ಯಕ್ತಿಗೆ ಹೃದಯಾಘಾತವಾಗಿದ್ದು, ಆಂಬುಲೆನ್ಸ್‌ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. 

ಡಿಜೆ ಸೌಂಡ್‌ ಗದ್ದಲ, ಹಾರ ಬದಲಿಸುತ್ತಿದ್ದಂತೆ ಹೃದಯಾಘಾತವಾಗಿ ಸಾವನ್ನಪ್ಪಿದ ವರ!